ಉಡುಪಿ: ಪಡುಬಿದ್ರಿಯಲ್ಲಿ ವ್ಯಕ್ತಿಯೋರ್ವ ತನ್ನ ಸ್ವಂತ ಪುತ್ರಿಯ ಖಾಸಗಿ ವಿಡಿಯೋಗಳನ್ನೇ ಸಾಮಾಜಿಕ ಜಾಲತಾಣ ಸೇರಿದಂತೆ ವಿವಿಧ ವಾಟ್ಸಾಪ್ ಗ್ರೂಪ್ಗಳಲ್ಲಿ ಹರಿಬಿಟ್ಟಿರುವ ಆರೋಪ ಕೇಳಿಬಂದಿದೆ. ಈ ಕುರಿತು ಪತಿ ವಿರುದ್ಧ ಪತ್ನಿಯೇ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣದ ಬೆನ್ನಲ್ಲೇ ಆರೋಪಿಯ ಮಗಳು ಆತ್ಮಹತ್ಯೆಗೆ ಯತ್ನಿಸಿದ್ದು, ಆಕೆಯನ್ನು ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಕರಣದ ವಿವರ:ಆರೋಪಿಯ ಪುತ್ರಿಯು ತೀರ್ಥಹಳ್ಳಿಯ ತಮ್ಮ ಸಂಬಂಧಿ ಆಗಿರುವ ಯುವಕನೋರ್ವನನ್ನು ಪ್ರೀತಿಸುತ್ತಿದ್ದಳು. ಇದು ಯುವತಿಯ ತಂದೆಗೆ ಇಷ್ಟವಿರಲಿಲ್ಲ. ಅಂತೆಯೇ ತನ್ನ ಮಗಳು ಪ್ರೀತಿಸುತ್ತಿದ್ದ ಹುಡಗನನ್ನು ಮನೆಗೆ ಕರೆಸಿ ಆತನ ಮೇಲೆ ಆರೋಪಿ ತಂದೆ ಹಲ್ಲೆ ಮಾಡಿದ್ದನಂತೆ. ಬಳಿಕ ಆ ಹುಡುಗನ ಮತ್ತು ತನ್ನ ಮಗಳ ಫೋನ್ಗಳನ್ನು ಕಸಿದುಕೊಂಡು ಅದರಲ್ಲಿದ್ದ ವಿಡಿಯೋಗಳನ್ನು ತನ್ನ ಫೋನ್ಗೆ ವರ್ಗಾಯಿಸಿಕೊಂಡು ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ವಿವಿಧ ವಾಟ್ಸಾಪ್ ಗ್ರೂಪ್ಗಳಿಗೆ ಕಳುಹಿಸಿದ್ದಾನೆ ಎಂದು ದೂರಲಾಗಿದೆ.