ಹಾವೇರಿ: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಮಾವ ಕೊಲೆ ಮಾಡಿರುವ ಘಟನೆ ಹಾನಗಲ್ ತಾಲೂಕಿನ ಬೈಚವಳ್ಳಿ ಗ್ರಾಮದ ಬಳಿ ನಡೆದಿದೆ. ಕೊಲೆಯಾದ ಯುವತಿಯನ್ನು 21 ವರ್ಷದ ದೀಪಾ ಗೊಂದಿ ಎಂದು ಗುರುತಿಸಲಾಗಿದೆ. 35 ವರ್ಷದ ಮಾಲತೇಶ ಬಾರ್ಕಿ ಕೊಲೆ ಮಾಡಿದ ಆರೋಪಿ ಎಂದು ತಿಳಿದುಬಂದಿದೆ.
ಏನಿದು ಪ್ರಕರಣ: ಆರೋಪಿ ಮಾಲತೇಶ್ ತನ್ನ ಸೊಸೆ ದೀಪಾಳೊಂದಿಗೆ ಮದುವೆ ನಿಶ್ಚಿತಾರ್ಥ ಮಾಡಿಕೊಂಡಿದ್ದ. ನಿಶ್ಚಿತಾರ್ಥದ ನಂತರ ಮಾವನೊಂದಿಗೆ ಮದುವೆಯಾಗಲು ದೀಪಾ ನಿರಾಕರಿಸಿದ್ದರಿಂದ ಈ ಕೊಲೆಗೆ ಕಾರಣ ಎನ್ನಲಾಗಿದೆ.