ಕರ್ನಾಟಕ

karnataka

ETV Bharat / state

ಪ್ರಾಸಿಕ್ಯೂಷನ್ ಅನುಮತಿ: ಎಚ್ಚರಿಕೆ ನಡೆ ಅನುಸರಿಸಿದ ರಾಜ್ಯಪಾಲರು, ಬುಲೆಟ್ ಪ್ರೂಫ್ ಕಾರು ಬಳಕೆ - Z Security to Governor - Z SECURITY TO GOVERNOR

ಪ್ರಾಸಿಕ್ಯೂಷನ್ ಅನುಮತಿ ನೀಡಿದ ಹಿನ್ನೆಲೆ ರಾಜ್ಯಪಾಲರು ಎಚ್ಚರಿಕೆ ನಡೆ ಅನುಸರಿಸಿದ್ದಾರೆ. ಅಷ್ಟೇ ಅಲ್ಲ ಬುಲೆಟ್ ಪ್ರೂಫ್ ಕಾರು ಬಳಸಲು ಮುಂದಾಗಿದ್ದು, ಆ.29ರವರೆಗೆ ಸಾರ್ವಜನಿಕ ಕಾರ್ಯಕ್ರಮಗಳಿಗೆ ಗೈರು ಆಗಲಿದ್ದರೆ ಎಂಬ ಮಾಹಿತಿ ಲಭ್ಯವಾಗಿದೆ.

PROSECUTION  GOVERNOR  BULLET PROOF CAR  BENGALURU
ಪ್ರಾಸಿಕ್ಯೂಷನ್ ಅನುಮತಿ: ಎಚ್ಚರಿಕೆ ನಡೆ ಅನುಸರಿಸಿದ ರಾಜ್ಯಪಾಲರು, ಬುಲೆಟ್ ಪ್ರೂಪ್ ಕಾರು ಬಳಕೆ (ETV Bharat)

By ETV Bharat Karnataka Team

Published : Aug 21, 2024, 2:17 PM IST

Updated : Aug 21, 2024, 2:58 PM IST

ಬೆಂಗಳೂರು: ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ ಬೆನ್ನಲೇ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗುತ್ತಿದೆ. ರಾಜ್ಯಪಾಲರ ನಿರ್ಧಾರ ಖಂಡಿಸಿ ಕಾಂಗ್ರೆಸ್ ಸೇರಿ ವಿವಿಧ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಇದರಿಂದ ಎಚ್ಚೆತ್ತುಕೊಂಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರು ಬುಲೆಟ್ ಪ್ರೂಫ್ ಕಾರು ಬಳಸಲು ಮುಂದಾಗಿದ್ದಾರೆ. ಅಲ್ಲದೆ, ಝೆಡ್ ಶ್ರೇಣಿಯ ಭದ್ರತೆಯನ್ನ ಪೊಲೀಸರು ಒದಗಿಸಿದ್ದಾರೆ.

ಪ್ರಾಸಿಕ್ಯೂಷನ್ ಅನುಮತಿ ವಿರೋಧಿಸಿ ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಯುತ್ತಿವೆ. ಮುಂಜಾಗ್ರತ ಕ್ರಮವಾಗಿ ನಗರ ಪೊಲೀಸರು ಬುಲೆಟ್ ಪ್ರೂಫ್ ಕಾರು ಬಳಕೆ ಹಾಗೂ ಝೆಡ್ ಶ್ರೇಣಿಯ ಭದ್ರತೆಯನ್ನ ಒದಗಿಸಲಾಗಿದೆ. ಆಗಸ್ಟ್ 29ರ ವರೆಗೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗದಂತೆ ಕೇಂದ್ರ ಗುಪ್ತಚರ ಇಲಾಖೆಯು ಮಾಹಿತಿ ನೀಡಿದೆ ಎಂದು ರಾಜಭವನದ ಮೂಲಗಳು ತಿಳಿಸಿವೆ.

ಎಚ್ಚರಿಕೆ ನಡೆ ಅನುಸರಿಸಿರುವ ರಾಜ್ಯಪಾಲರು ಇಂದು ಮೈಸೂರು ಬ್ಯಾಂಕ್ ವೃತ್ತದ ಬಳಿಯಿರುವ ನೃಪತುಂಗ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಆಗಸ್ಟ್ 29ರವರೆಗೆ ಸಾರ್ವಜನಿಕ ಕಾರ್ಯಕ್ರಮಗಳಿಗೆ ರಾಜ್ಯಪಾಲರು ಬಹುತೇಕ ಗೈರಾಗುವ ಸಾಧ್ಯತೆಯಿದೆ. ಪ್ರಾಸಿಕ್ಯೂಷನ್ ಅನುಮತಿ ರದ್ದು ಕೋರಿ ಸಿದ್ದರಾಮಯ್ಯ ಅವರು ಹೈಕೋರ್ಟ್ ಹೋಗಿದ್ದು, ಮೂಂದೂಡಿಕೆಯಾಗಿದ್ದ ಅರ್ಜಿ ವಿಚಾರಣೆ ಆಗಸ್ಟ್ 29ರಂದು ಬರಲಿದೆ. ಅಲ್ಲಿವರೆಗೂ ಯಾವುದೇ ರೀತಿ ಕ್ರಮ ಕೈಗೊಳ್ಳಬಾರದೆಂದು ನ್ಯಾಯಾಲಯವು ನಿರ್ದೇಶಿಸಿತ್ತು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರು ಇದಕ್ಕೂ ಮುನ್ನ ಬುಲೆಟ್ ಪ್ರೂಫ್ ಇರುವ ಕಾರನ್ನು ಪಡೆದುಕೊಳ್ಳದೇ ಸಾಮಾನ್ಯ ಕಾರನ್ನೇ ಬಳಕೆ ಮಾಡುತ್ತಿದ್ದರು.

ಓದಿ:ರಾಜ್ಯಪಾಲರು ರಾಷ್ಟ್ರಪತಿಯ ಪ್ರತಿನಿಧಿಯಾಗಿ ಕೆಲಸ ಮಾಡಬೇಕು, ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಅಲ್ಲ: ಸಿಎಂ - CM Siddaramaiah

Last Updated : Aug 21, 2024, 2:58 PM IST

ABOUT THE AUTHOR

...view details