ಬೆಂಗಳೂರು :ಗೃಹಿಣಿಯೊಬ್ಬರ ಶವ ನೇಣು ಬಿಗಿದುಕೊಂಡು ಸ್ಥಿತಿಯಲ್ಲಿ ಪತ್ತೆಯಾದ ಘಟನೆ ರಾಜಗೋಪಾಲ ನಗರದ ಮೋಹನ್ ಥಿಯೇಟರ್ ಸಮೀಪದ ಮನೆಯೊಂದರಲ್ಲಿ ನಡೆದಿದೆ. ಮೃತಳನ್ನು ಕಾವ್ಯ (22) ಎಂದು ಗುರುತಿಸಲಾಗಿದೆ. ಕುಣಿಗಲ್ ಮೂಲದ ಕಾವ್ಯಳಿಗೆ ಎರಡು ವರ್ಷಗಳ ಹಿಂದಷ್ಟೇ ಪ್ರವೀಣ್ ಎಂಬಾತನೊಂದಿಗೆ ಮದುವೆಯಾಗಿತ್ತು. ದಂಪತಿಗೆ ಒಂದು ವರ್ಷದ ಮಗು ಸಹ ಇದೆ. ಮನೆಯಲ್ಲಿ ಯಾರೂ ಇರದ ವೇಳೆ ಕಾವ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆ ; ಪತಿಯ ವಿಚಾರಣೆ - ಗೃಹಿಣಿಯ ಶವ ಪತ್ತೆ
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆಯಾಗಿದ್ದು, ಪೊಲೀಸರು ಮೃತಳ ಪತಿಯ ವಿಚಾರಣೆ ಕೈಗೊಂಡಿದ್ದಾರೆ.
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆ
Published : Feb 12, 2024, 1:01 PM IST
|Updated : Feb 12, 2024, 1:07 PM IST
ಘಟನಾ ಸ್ಥಳಕ್ಕೆ ರಾಜಗೋಪಾಲ ನಗರ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ಕೈಗೊಂಡಿದ್ದಾರೆ. ಮೃತಳ ಪತಿ ಮತ್ತು ಆತನ ಪೋಷಕರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಓದಿ:ಮನೆಯಲ್ಲಿ ಕಾಣಿಸಿಕೊಂಡ ಬೆಂಕಿ: ಮಹಡಿಯಲ್ಲಿ ಮಲಗಿದ್ದ ಮೂವರು ಸಹೋದರಿಯರು ಬೆಂಕಿಗಾಹುತಿ
Last Updated : Feb 12, 2024, 1:07 PM IST