ಬೆಂಗಳೂರು:ಪಟಾಕಿ ಅವಘಡಗಳಿಂದ ಕಣ್ಣಿಗೆ ಹಾನಿಯಾಗುತ್ತಿರುವ ಪ್ರಕರಣಗಳು ನಗರದಲ್ಲಿ ಹೆಚ್ಚಾಗುತ್ತಲೆ ಇದೆ. ಶುಕ್ರವಾರ ಒಂದೇ ದಿನ ಕಣ್ಣಿನ ತೊಂದರೆಗೆ ಒಳಗಾದ ಪ್ರಕರಣ ಸಂಖ್ಯೆ 54ಕ್ಕೆ ಏರಿಕೆಯಾಗಿದೆ. ಬಹುತೇಕರು ಬೇರೆಯವರು ಸಿಡಿಸಿರುವ ಪಟಾಕಿಯಿಂದ ಕಣ್ಣಿನ ಗಾಯಕ್ಕೊಳಗಾಗಿದ್ದಾರೆ ಎನ್ನುವುದು ಕಳವಳಕಾರಿ ಸಂಗತಿ.
ರಾಜ್ಯ ಪೊಲೀಸ್ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳು ಸೇರಿದಂತೆ ಹಲವು ಇಲಾಖೆಗಳು ಸಂಘ ಸಂಸ್ಥೆಗಳು ಪಟಾಕಿ ಹಚ್ಚುವ ವೇಳೆ ಮುಂಜಾಗೃತಾ ಕ್ರಮ ವಹಿಸುವಂತೆ ಜಾಗೃತಿ ಮೂಡಿಸಿದ್ದರೂ ಪಟಾಕಿ ದುರಂತಗಳು ಸಂಭವಿಸುತ್ತಲೇ ಇವೆ.
ವರದಿಯಂತೆ ಓರ್ವ ವಯಸ್ಕ ಸೇರಿದಂತೆ 10 ಮಕ್ಕಳು ಪಟಾಕಿ ಅವಘಡಗಳಿಗೆ ತುತ್ತಾಗಿ ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. 6 ಮಂದಿ ಒಪಿಡಿ ಹಾಗೂ 4 ಮಂದಿ ನಾನ್ ಒಪಿಡಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ ಒಂದು ಮಗುವಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ.