ಬೆಂಗಳೂರು:ರಾಜ್ಯದಲ್ಲಿ ಜೂನ್ 14 ರಿಂದ 22 ರವರಗೆ ನಡೆದಿದ್ದ ಎಸ್ಎಸ್ಎಲ್ಸಿ ಪರೀಕ್ಷೆ-2ರ ಫಲಿತಾಂಶ ಇಂದು ಪ್ರಕಟಗೊಳ್ಳುತ್ತಿದ್ದು, ಅಧಿಕೃತ ವೆಬ್ ತಾಣದಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
2024ರ ಎಸ್ಎಸ್ಎಲ್ಸಿ ಪರೀಕ್ಷೆ-2ರ ಫಲಿತಾಂಶವನ್ನು ಜುಲೈ 10 (ನಾಳೆ) ಬೆಳಗ್ಗೆ 11:30ಕ್ಕೆ ಅಧಿಕೃತ ವೆಬ್ ಸೈಟ್ https://karresults.nic.in ನಲ್ಲಿ ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ರಾಜ್ಯದ 724 ಪರೀಕ್ಷಾ ಕೇಂದ್ರಗಳಲ್ಲಿ ಜೂನ್ 14 ರಿಂದ 22 ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ-2 ನಡೆದಿದ್ದು, ಏಳು ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. 1.44 ಲಕ್ಷ ಬಾಲಕರು, 79,148 ಬಾಲಕಿಯರು ಸೇರಿದಂತೆ ಒಟ್ಟು 2.23 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ-2ಕ್ಕೆ ಹೆಸರು ನೋಂದಾಯಿಸಿಕೊಂಡಿದ್ದರು. ಅವರಲ್ಲಿ 13,085 ವಿದ್ಯಾರ್ಥಿಗಳು ಫಲಿತಾಂಶ ವೃದ್ಧಿಗಾಗಿ ಎರಡನೇ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು.
ಇದನ್ನೂ ಓದಿ:ಸ್ಪರ್ಧಾತ್ಮಕ ಪರೀಕ್ಷೆಗಳ ಸುಧಾರಣೆಗೆ 7 ಸದಸ್ಯರ ಸಮಿತಿ ರಚಿಸಿದ ಕೇಂದ್ರ ಸರ್ಕಾರ - High Level Committee