ಬೆಂಗಳೂರು:ನಗರದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳನ್ನು ವಿರುದ್ಧ ಸಾರಿಗೆ ಇಲಾಖೆಗಳು ಸಮರ ಸಾರಿವೆ. ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟ ಗುರುವಾರ ಶಾಂತಿನಗರ ಸಾರಿಗೆ ಆಯುಕ್ತರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದ ಹಿನ್ನೆಲೆ ನಗರದ 11 ಆರ್ಟಿಒ ಕಚೇರಿಗಳ ವ್ಯಾಪ್ತಿಯಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳು ಒಳಗೊಂಡಂತೆ ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ ಸಾರಿಗೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ.
ಬೈಕ್ ಟ್ಯಾಕ್ಸಿ ಸೇವೆಗಳಿಂದಾಗಿ ರಾಜ್ಯದಲ್ಲಿ ಆಟೋ, ಟ್ಯಾಕ್ಸಿ, ಕ್ಯಾಬ್ ಮತ್ತಿತರ ಬಾಡಿಗೆ ವಾಹನಗಳ ಚಾಲಕರು ಸಂಕಷ್ಟ ಎದುರಿಸುತ್ತಿದ್ದಾರೆ. ಬಾಡಿಗೆ ವಾಹನಗಳ ಚಾಲಕರ ವಿರೋಧದ ನಡುವೆಯೂ ಸಹ ರ‍್ಯಾಪಿಡೋ, ಓಲಾ ಮತ್ತಿತರ ಕಂಪನಿಗಳ ಬೈಕ್ ಟ್ಯಾಕ್ಸಿಗಳು ಕಾರ್ಯ ನಿರ್ವಹಿಸುತ್ತಲೇ ಇವೆ. ಈಗಾಗಲೇ 2021ರಲ್ಲಿ ಆಟೋ, ಟ್ಯಾಕ್ಸಿ ವಾಹನಗಳ ಚಾಲಕರು ಮತ್ತು ಮಾಲೀಕರ ಸಂಘಟನೆಯ ವತಿಯಿಂದ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವಂತೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡಲಾಗಿತ್ತು.