ಕರ್ನಾಟಕ

karnataka

ETV Bharat / state

ಫೇಕ್​ ನ್ಯೂಸ್​ಗಳ ಪತ್ತೆ, ನಿಯಂತ್ರಣ, ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ ಫ್ಯಾಕ್ಟ್ ಚೆಕ್ ಘಟಕ; ಸಿಎಂ ಸಿದ್ದರಾಮಯ್ಯ - Press Day

ಫೇಕ್​ ನ್ಯೂಸ್​ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

CM SIDDARAMAIAH  FAKE NEWS  VERY CAREFUL  BENGALURU
ಸಿಎಂ ಸಿದ್ದರಾಮಯ್ಯ (ETV Bharat)

By ETV Bharat Karnataka Team

Published : Jul 1, 2024, 1:58 PM IST

ಬೆಂಗಳೂರು: ಫೇಕ್​ ನ್ಯೂಸ್​ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ (ETV Bharat)

ಬೆಂಗಳೂರು ಪ್ರೆಸ್​ಕ್ಲಬ್, ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತಿ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು, ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ. ಫೇಕ್​ ನ್ಯೂಸ್​ಗಳ ಪತ್ತೆಗೆ, ನಿಯಂತ್ರಣಕ್ಕೆ, ಈ ಬಗ್ಗೆ ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ ಫ್ಯಾಕ್ಟ್ ಚೆಕ್ (Fact check) ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ ಎಂದರು.

ಸಿಎಂ ಸಿದ್ದರಾಮಯ್ಯ ಭಾಷಣ (ETV Bharat)

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಸೂರಳ್ಕರ್ ವಿಕಾಸ್ ಕಿಶೋರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ವಿಧಾನ ಪರಿಷತ್ ಸದಸ್ಯರಾದ ಯು.ಬಿ.ವೆಂಕಟೇಶ್, ಪ್ರೆಸ್​​ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಅವರು ಉಪಸ್ಥಿತರಿದ್ದರು. ಹಿರಿಯ ಪತ್ರಕರ್ತರಾದ ಕೃಷ್ಣಪ್ರಸಾದ್ ಅವರು ಪ್ರಧಾನ ಭಾಷಣದಲ್ಲಿ ಪತ್ರಿಕೋದ್ಯಮದ ಈ ಕ್ಷಣದ ಸ್ಥಿತಿಗತಿಯನ್ನು ವಿವರಿಸಿದರು.

ಸಿಎಂ ಸಿದ್ದರಾಮಯ್ಯ (ETV Bharat)

ಓದಿ:ಇವತ್ತಿನಿಂದ ಎಲ್ಲಾ ದೂರುಗಳು ಹೊಸ ಅಪರಾಧ ಕಾನೂನಿನಡಿ ದಾಖಲು: ಸಚಿವ ಜಿ. ಪರಮೇಶ್ವರ್ - New Criminal Law

ABOUT THE AUTHOR

...view details