ಗಂಗಾವತಿ:ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು ಕನಕಗಿರಿಯ ಕನಕಾಚಲ ದೇವಸ್ಥಾನದ ಜಾತ್ರೆ ಮತ್ತು ರಥೋತ್ಸವದಲ್ಲಿ ಗರುಡೋತ್ಸವದಲ್ಲಿ ಭಾನುವಾರ ಭಾಗವಹಿಸಿದ್ದರು. ಈ ವೇಳೆ ಯುವಕರು ಮೋದಿ ಮೋದಿ ಎಂದು ಘೋಷಣೆ ಕೂಗುವ ಮೂಲಕ ತಂಗಡಗಿ ಅವರನ್ನು ಮುಜುಗರಕ್ಕೀಡು ಮಾಡಿದ ಪ್ರಸಂಗ ನಡೆಯಿತು.
ವಿದ್ಯಾರ್ಥಿಗಳು, ಯುವಕರು ಮೋದಿ ಎಂದರೆ ಕಪಾಳಕ್ಕೆ ಹೊಡೆಯಬೇಕು ಎಂಬ ಆಕ್ಷೇಪಾರ್ಹ ಹೇಳಿಕೆಯನ್ನು ಸಚಿವ ತಂಗಡಗಿ ಇತ್ತೀಚೆಗೆ ನೀಡಿದ್ದರು. ಆದ್ರೆ, ಇಂದು ಗರುಡೋತ್ಸವದಲ್ಲಿ ಭಾಗಿಯಾಗಲು ತಮ್ಮ ಬೆಂಬಲಿಗರೊಂದಿಗೆ ದೇವಸ್ಥಾನದ ಮುಂಭಾಗ ಬರುತ್ತಿದ್ದಂತೆಯೇ ಉತ್ಸವದಲ್ಲಿ ನೆರೆದ ಅಪಾರ ಜನಸ್ತೋಮದ ಮಧ್ಯೆ ಇದ್ದ ಯುವಕರು, ಮೋದಿ ಮೋದಿ ಎಂದು ಘೋಷಣೆ ಕೂಗಿದರು. ಈ ವೇಳೆ ವಿಚಲಿತರಾದ ತಂಗಡಗಿ ತಮ್ಮ ಬೆಂಬಲಿಗರೊಂದಿಗೆ ಮುಂದೆ ಹೆಜ್ಜೆ ಹಾಕಿದರು.