ಮೈಸೂರು : ಕೆಆರ್‌ಎಸ್ ಅಣೆಕಟ್ಟೆಯ ಬಳಿ ಟ್ರಯಲ್ ಬ್ಲಾಸ್ಟ್ ನಡೆಸಿದರೆ ಅಪಾಯ. ಇದನ್ನ ರೈತ ಸಂಘ ವಿರೋಧಿಸುತ್ತದೆ ಎಂದು ರಾಜ್ಯ ರೈತ ಸಂಘದ ಹಸಿರು ಸೇನೆಯ ರಾಜಾಧ್ಯಕ್ಷ ಬಡಗಲಪುರ ನಾಗೇಂದ್ರ ಈಟಿವಿ ಭಾರತ್ಗೆ ನೀಡಿದ ಸಂದರ್ಶನದಲ್ಲಿ ವಿವರಿಸಿದ್ದಾರೆ.
ಈಟಿವಿ ಭಾರತ ಜತೆ ಮಾತನಾಡಿದ ಅವರು, ಕೆಆರ್ಎಸ್ನ ಬಳಿ ಟ್ರಯಲ್ ಬ್ಲಾಸ್ಟ್ ನಡೆಸುವುದು ಅಪಾಯವಿದೆ ಅನ್ನೋದರ ಬಗ್ಗೆ ಕಳೆದ 20 ವರ್ಷಗಳ ಹಿಂದೆ ದಿವಂಗತ ಪುಟ್ಟಣ್ಣಯ್ಯನವರು ಅಧಿವೇಶದಲ್ಲಿ ಈ ವಿಚಾರ ಚರ್ಚೆ ಮಾಡಿದ್ದರು. ಸರ್ಕಾರ ಕೆಆರ್‌ಎಸ್ ಸುತ್ತಮುತ್ತ 20 ಕಿ. ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಸುವುದನ್ನ ಕೆಆರ್‌ಎಸ್ ಅಣೆಕಟ್ಟೆಯ ಸುರಕ್ಷತೆ ದೃಷ್ಟಿಯಿಂದ ನಿಷೇಧ ಮಾಡಿತ್ತು ಎಂದರು.
ಆದರೆ, ಗಣಿಗಾರಿಕೆಗೆ ಲೈಸನ್ಸ್ ಪಡೆದಿರುವ ವ್ಯಕ್ತಿಗಳು ಕೋರ್ಟ್ಗೆ ಹೋಗಿದ್ದಾರೆ. ಈ ಸಂದರ್ಭದಲ್ಲಿ ಕೋರ್ಟ್ಗೆ ಜಿಲ್ಲಾಡಳಿತ ಟ್ರಯಲ್ ಬ್ಲಾಸ್ಟ್ ನಡೆಸುವ ಬಗ್ಗೆ ಹೇಳಿತು. ಆದರೆ, ಕೆಆರ್‌ಎಸ್ ಬಳಿ ಟ್ರಯಲ್ ಬ್ಲಾಸ್ಟ್ ನಡೆಸುವಂತೆ ಯಾವುದೇ ಸೂಚನೆ ನೀಡಿಲ್ಲ. ಆದರೂ ಜಿಲ್ಲಾಡಳಿತ ಗಣಿಗಾರಿಕೆ ನಡೆಸುವರರ ಪರವಾಗಿ ಡ್ಯಾಂ ಬಳಿ ಟ್ರಯಲ್ ಬ್ಲಾಸ್ಟ್ ನಡೆಸಲು ಮುಂದಾಗಿದೆ ಎಂದು ಹೇಳಿದರು.