ಕರ್ನಾಟಕ

karnataka

ಗ್ಯಾರಂಟಿ ಯೋಜನೆಯಲ್ಲಿ ಯಾವುದೇ ಬದಲಾವಣೆ ಇಲ್ಲ: ಸಚಿವ ಈಶ್ವರ್ ಖಂಡ್ರೆ - Guarantee Schemes

By ETV Bharat Karnataka Team

Published : Aug 14, 2024, 4:36 PM IST

ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಒಂದು ಕೋಟಿಗೂ ಹೆಚ್ಚು ಜನರು ಬಡತನ ರೇಖೆಯಿಂದ ಹೊರಬಂದಿದ್ದಾರೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದರು.

Eshwar-khandre
ಸಚಿವ ಈಶ್ವರ್ ಖಂಡ್ರೆ (ETV Bharat)

ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯೆ (ETV Bharat)

ಬೆಂಗಳೂರು:ರಾಜ್ಯ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದ್ದು, ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಐದೂ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದಿದೆ. ಇದರ ಪರಿಣಾಮವಾಗಿ 1 ಕೋಟಿಗೂ ಹೆಚ್ಚು ಜನರು ಬಡತನ ರೇಖೆಯಿಂದ ಹೊರಬಂದಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

ವಿಕಾಸಸೌಧದಲ್ಲಿ ಇಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದಾಗಿ ಹಣದ ಹರಿವು ನಿರಂತರವಾಗಿದ್ದು, ಜನರ ಕೊಳ್ಳುವ ಶಕ್ತಿ ಹೆಚ್ಚಾಗಿದೆ. ಇದು ರಾಜ್ಯದ ಪ್ರಗತಿಗೂ ಪರೋಕ್ಷವಾಗಿ ಪ್ರಯೋಜನವಾಗುತ್ತಿದೆ. ಹೀಗಾಗಿ ಗ್ಯಾರಂಟಿ ಯೋಜನೆ ಯಾವುದೇ ಬದಲಾವಣೆ ಇಲ್ಲದೆ, ಪ್ರಸಕ್ತ ಸ್ವರೂಪದಲ್ಲಿ ಮುಂದುವರೆಯುತ್ತದೆ ಎಂದರು.

ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ ಬಡವರು, ದುರ್ಬಲರು, ವಂಚಿತರು, ಶೋಷಿತರ ಪರವಾಗಿ ನಿಂತಿದೆ. ಅವರ ಸರ್ವಾಂಗೀಣ ಅಭಿವೃದ್ಧಿಗಾಗಿ, ಕಲ್ಯಾಣಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದೆ. ಸಮಾಜಮುಖಿ ಮತ್ತು ಸಾಮಾಜಿಕ ಕಲ್ಯಾಣ ಯೋಜನೆಗಳನ್ನು ಆರ್ಥಿಕ ಲಾಭ ನಷ್ಟದಿಂದ ನೋಡಬಾರದು. ಮುಖ್ಯಮಂತ್ರಿಗಳು ಗ್ಯಾರಂಟಿ ಯೋಜನೆ ಮುಂದುವರೆಯುತ್ತದೆ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಹಾಗಾಗಿ, ಅವು ಮುಂದುವರಿಯುತ್ತವೆ ಎಂದು ತಿಳಿಸಿದರು.

ಇದನ್ನೂ ಓದಿ:ಪಶ್ಚಿಮಘಟ್ಟ ಸೇರಿ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ ರಚನೆ, ನಾಳೆಯಿಂದ ಕಾರ್ಯಾಚರಣೆ: ಸಚಿವ ಈಶ್ವರ ಖಂಡ್ರೆ - Forest Land Encroachment

ABOUT THE AUTHOR

...view details