ಬೆಂಗಳೂರು: ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಹಾಗು ಮರುನೇಮಕದ ಬಗ್ಗೆ ಯಾವುದೇ ಅನುಮಾನವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಮಲ್ಲೇಶ್ವರದ ಬಿಜೆಪಿ ಕಾರ್ಯಾಲಯದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇನ್ನೂ ಅನೇಕ ರಾಜ್ಯಗಳಲ್ಲಿ ಬಿಜೆಪಿ ಅಧ್ಯಕ್ಷರ ಆಯ್ಕೆ ಆಗಬೇಕಿದೆ. ಉಳಿದ ಜಿಲ್ಲಾಧ್ಯಕ್ಷರ ಆಯ್ಕೆ ಎರಡು-ಮೂರು ದಿನಗಳಲ್ಲಿ ಆಗಲಿದೆ. ಶೀಘ್ರದಲ್ಲೇ ಹೈಕಮಾಂಡ್ಗೆ ಜಿಲ್ಲಾಧ್ಯಕ್ಷರ ಪಟ್ಟಿ ರವಾನೆಯಾಗಲಿದೆ ಎಂದರು.
ನಮ್ಮ ಪಕ್ಷದ ಆಂತರಿಕ ಸಮಸ್ಯೆಗಳು ಕೇಂದ್ರದ ವರಿಷ್ಠರ ಗಮನಕ್ಕೆ ಬಂದಿದೆ. ಯಾರಿಗೆ ನೋಟಿಸ್ ಕೊಡಬೇಕಿತ್ತೋ ಕೊಟ್ಟಾಗಿದೆ. ಅವರು ಅದಕ್ಕೆ ಉತ್ತರ ಕೊಟ್ಟಿದ್ದಾರೆ. ರಾಜ್ಯದ ಹಾಗೂ ಜನರ ಹಿತದೃಷ್ಟಿ ಮತ್ತು ಪಕ್ಷದ ಹಿತದೃಷ್ಟಿಯಿಂದ ಕೇಂದ್ರ ನಾಯಕರು ಈ ಸಮಸ್ಯೆಗಳನ್ನು ಬಗೆಹರಿಸುತ್ತಾರೆ ಎಂದು ಹೇಳಿದರು.
ಯತ್ನಾಳ್ ತಂಡದವರಿಗೆ ರೆಬೆಲ್ ಅನ್ನಬೇಡಿ: ಮತ್ತೊಮ್ಮೆ ಬಲಿಷ್ಠ ಬಿಜೆಪಿಯನ್ನು ರಾಜ್ಯದಲ್ಲಿ ಪ್ರತಿಷ್ಠಾಪಿಸಲು ಎಲ್ಲರೊಂದಿಗೆ ಒಟ್ಟಾಗಿ ಹೋಗಲು ನಾನು ಸಿದ್ದ. ಎಲ್ಲರೂ ಇದಕ್ಕೆ ಕೈ ಜೋಡಿಸುತ್ತಾರೆ. ರೆಬೆಲ್ ಅಂತ ಯತ್ನಾಳ್ ತಂಡದವರಿಗೆ ಅನ್ನಬೇಡಿ. ಅವರು ಪಕ್ಷ ಸಂಘಟನೆ ಸಭೆ ಮಾಡುತ್ತಿದ್ದಾರೆ ಎಂದು ನಾಳಿನ ರೆಬೆಲ್ ಟೀಂ ಸಭೆಯ ವಿಚಾರಕ್ಕೆ ವಿಜಯೇಂದ್ರ ಈ ರೀತಿ ಪ್ರತಿಕ್ರಿಯಿಸಿದರು.
ಇದನ್ನೂ ಓದಿ:ಆಲ್ ಇಸ್ ವೆಲ್ ಬದಿಗಿಟ್ಟು ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಿ: ಬಿ.ವೈ.ವಿಜಯೇಂದ್ರ ಆಗ್ರಹ - VIJAYENDRA DEMANDS FOR WHITE PAPER