ಹುಬ್ಬಳ್ಳಿ:ಸಿಎಂಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಹುಟ್ಟಿಲ್ಲ. ಇದು ಬಿಜೆಪಿ ನಾಯಕರು, ಸಿದ್ದರಾಮಯ್ಯ ವಿರೋಧಿಗಳು ಮಾಡಿರುವ ಷಡ್ಯಂತ್ರ. ಎಲ್ಲಾ ಮಂತ್ರಿಗಳು, ಶಾಸಕರು ಸಿದ್ದರಾಮಯ್ಯ ಅವರಿಗೆ ಬೆಂಬಲ ಕೊಡ್ತಿದ್ದೇವೆ ಎಂದು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.
ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಹೆಚ್.ಕೆ.ಪಾಟೀಲ್ - H K Patil - H K PATIL
ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿ ಒತ್ತಾಯಿಸುತ್ತಿವೆ. ಈ ಕುರಿತು ಸಚಿವ ಹೆಚ್.ಕೆ.ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.
ಸಚಿವ ಹೆಚ್.ಕೆ.ಪಾಟೀಲ್ (ETV Bharat)
Published : Aug 19, 2024, 8:46 PM IST
ನಗರದಲ್ಲಿಂದು ಮಾತನಾಡಿದ ಅವರು, ರಾಜ್ಯಪಾಲರು ಅಸಾಂವಿಧಾನಿಕವಾಗಿ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ. ಇದು ರಾಜಕೀಯ ಪ್ರೇರಿತವಾದ ಅನ್ಯಾಯದ ಕ್ರಮ. ಇಂದು ರಾಜ್ಯಾದ್ಯಂತ ಪ್ರತಿಭಟನೆ ಮಾಡ್ತಿದ್ದೇವೆ. ಮೈಸೂರಲ್ಲಿ ಸೇರಿದ ಜನ ನೋಡಿಯಾದ್ರೂ ರಾಜ್ಯಪಾಲರು ತಮ್ಮ ಕ್ರಮ ಬದಲಾಯಿಸಿಕೊಳ್ಳಬೇಕಿತ್ತು ಎಂದರು.
ಇದನ್ನೂ ಓದಿ :ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ: ಸಿಎಂ ಸಿದ್ದರಾಮಯ್ಯ - CM Siddaramaiah