ಸಚಿವ ಭೈರತಿ ಸುರೇಶ್ ಹೇಳಿಕೆ (ETV Bharat) ಚಾಮರಾಜನಗರ:ಮುಡಾದಲ್ಲಿ ಯಾವುದೇ ಹಗರಣ ನಡೆದಿಲ್ಲ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೇಳಿದರು. ಚಾಮರಾಜನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದಕ್ಕೂ ಡಿಕೆಶಿಗೂ ಸಂಬಂಧವಿಲ್ಲ. ಘಟನೆ ತನಿಖೆಯ ಹಂತದಲ್ಲಿದೆ ಎಂದರು.
ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂಬ ಬಿಜೆಪಿ ಒತ್ತಾಯಕ್ಕೆ, ಹಗರಣ ಎಂದೇ ಸಾಬೀತಾಗಿಲ್ಲ. ಸಿಬಿಐಗೆ ಏಕೆ ಕೊಡಬೇಕು?. ನಮ್ಮ ರಾಜ್ಯದಲ್ಲಿ ಪೊಲೀಸರು ಇಲ್ವಾ?. ಬಿಜೆಪಿಯವರು ಸಿಬಿಐಗೆ ಕೊಟ್ಟು ಏನು ಮಹಾ ಕೆಲಸ ಮಾಡಿದ್ದಾರೆ. ಅವರೆಷ್ಟು ಸಿಬಿಐಗೆ ಕೊಟ್ಟಿದ್ದಾರೆ ಎಂದರು.
ರಾಮನಗರವನ್ನು ಬೆಂಗಳೂರಿಗೆ ಸೇರ್ಪಡೆ ಮಾಡುವ ವಿಚಾರಕ್ಕೆ ಮಾತನಾಡಿ, ಡಿಕೆಶಿ ಬೆಂಗಳೂರು ನಗರಾಭಿವೃದ್ಧಿ ಸಚಿವರು. ಅವರು ನಿರ್ಧಾರ ತೆಗೆದುಕೊಂಡ ಬಳಿಕ ಚರ್ಚೆ ನಡೆಸುತ್ತೇವೆ ಎಂದು ಹೇಳಿದರು.
ವಿಶ್ವನಾಥ್ ವಿರುದ್ಧ ವಾಗ್ದಾಳಿ: ಬೈರತಿ ಸುರೇಶ್ ರಿಯಲ್ ಎಸ್ಟೇಟ್ ಉದ್ಯಮಿ ಎಂದು ಕಿಡಿಕಾರಿದ್ದ ಶಾಸಕ ಎಚ್.ವಿಶ್ವನಾಥ್ ಹೇಳಿಕೆಗೆ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಅವರು, ಏ.. ಯಾರ್ರಿ ಅವ್ನು? ರಿಯಲ್ ಎಸ್ಟೇಟ್ ಒಂದು ಉದ್ಯಮ ಅಲ್ವಾ?. ಅವ್ನು ಅವನ ಮಗ ನನ್ನ ಮನೆಗೆ ಸೈಟ್ ಕೇಳೋಕೆ ಬಂದಿದ್ದ ಫೋಟೊ ಇದೆ. ಅವ್ನು ಏಕವಚನ ಬಳಸಿದ್ರೆ ನನಗೆ ಅದಕ್ಕಿಂತ ಹೆಚ್ಚಿಗೆ ಮಾತನಾಡೋಕೆ ಬರುತ್ತೆ. ನಾನು ಹಳ್ಳಿಯಲ್ಲೇ ಹುಟ್ಟಿ ಬೆಳೆದಿರೋದು. ಮೊದ್ಲು ಮರ್ಯಾದೆ ಕೊಟ್ಟೆ ಮರ್ಯಾದೆ ತೆಗೆದುಕೊಳ್ಳಲಿ. ವಿಶ್ವನಾಥ್ ಥರ ನಾನು ರೋಲ್ ಕಾಲ್ ಗಿರಾಕಿ ಅಲ್ಲ. ವಯಸ್ಸಾಗಿದೆ ಅಂತ ಅಷ್ಟೇ ಬೆಲೆ ಕೊಡ್ತೀವಿ. ಅದನ್ನು ಉಳಿಸಿಕೊಳ್ಳಲಿ ಎಂದು ಆಕ್ರೋಶ ಹೊರಹಾಕಿದರು.
ಇದನ್ನೂ ಓದಿ:ಸಿಎಂ ಕುರ್ಚಿ ಮೇಲೆ ಟವೆಲ್ ಹಾಕಿದವರಿಂದಲೇ ಮುಡಾ ಹಗರಣ ಬಯಲು: ಹೆಚ್‌ಡಿಕೆ - H D Kumaraswamy