ಕರ್ನಾಟಕ

karnataka

ETV Bharat / state

ಬಿಜೆಪಿಯವರಿಗೆ ನನ್ನ ರಾಜೀನಾಮೆ ಕೇಳುವ ನೈತಿಕ ಹಕ್ಕಿಲ್ಲ: ಸಿಎಂ ಸಿದ್ದರಾಮಯ್ಯ - MUDA Case - MUDA CASE

ಬಿಜೆಪಿ, ಜೆಡಿಎಸ್ ನನ್ನ ರಾಜೀನಾಮೆ ಕೇಳುವ ಮೂಲಕ ಸುಭದ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಆರೋಪಿಸಿದ್ದಾರೆ.

MUDA CASE
ಸಿಎಂ ಸಿದ್ದರಾಮಯ್ಯ (ETV Bharat)

By ETV Bharat Karnataka Team

Published : Sep 27, 2024, 2:15 PM IST

Updated : Sep 27, 2024, 3:07 PM IST

ಮೈಸೂರು:ಆಪರೇಷನ್‌ ಕಮಲದ ಮೂಲಕ ಬಿಜೆಪಿಯವರು ನಮ್ಮ ಸುಭದ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಹಿಂದೆ ಆಪರೇಷನ್‌ ಕಮಲದ ಮೂಲಕ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸಿದ್ದರು. ಅದು ಈಡೇರಲಿಲ್ಲ. ಈಗ ನನ್ನ ರಾಜೀನಾಮೆ ಕೇಳುವ ಮೂಲಕ ಸುಭದ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ರಾಜೀನಾಮೆ ಕೇಳಲು ಅವರಿಗೆ ಯಾವ ನೈತಿಕ ಹಕ್ಕೂ ಇಲ್ಲ ಎಂದರು.

ಸಿಎಂ ಸಿದ್ದರಾಮಯ್ಯ (ETV Bharat)

ಈ ವಿಚಾರದಲ್ಲಿ ನಾವು ಕಾನೂನು ಹೋರಾಟ ಮಾಡುತ್ತೇವೆ. ಬೇಲ್‌ ಮೇಲಿರುವ ಹೆಚ್.​ಡಿ.ಕುಮಾರಸ್ವಾಮಿ ಈಗ ಕೇಂದ್ರ ಮಂತ್ರಿಗಳಾಗಿದ್ದಾರೆ. ಅವರ ರಾಜೀನಾಮೆ ಏಕೆ ಕೇಳುವುದಿಲ್ಲ? ರಾಜ್ಯ ಬಿಜೆಪಿಯಲ್ಲಿ ಅನೇಕ ಭ್ರಷ್ಟರಿದ್ದಾರೆ. ಅವರಿಗೆ ಇಂದಿಗೂ ರಾಜ್ಯದ ಜನ ಬಹುಮತ ನೀಡಿಲ್ಲ. ನಮಗೆ ಜನ ಬಹುಮತ ನೀಡಿ ಆಶೀರ್ವಾದ ಮಾಡಿದ್ದಾರೆ ಎಂದು ಸಿಎಂ ವಾಗ್ದಾಳಿ ನಡೆಸಿದರು.

ಆಡಳಿತದ ವಿಚಾರದಲ್ಲಿ ಹಸ್ತಕ್ಷೇಪ ಸರಿಯಲ್ಲ: ರಾಷ್ಟ್ರಪತಿಗಳಾಗಲಿ, ರಾಜ್ಯಪಾಲರಾಗಲಿ ಸಂವಿಧಾನಾತ್ಮಕವಾಗಿ ಕೆಲಸ ಮಾಡಬೇಕು. ಅವರು ಭಾರತೀಯ ಸಂವಿಧಾನದ ಮುಖ್ಯಸ್ಥರು. ಅದರಂತೆ ಯಾವ ರಾಜ್ಯಪಾಲರಾದರೂ ಆಡಳಿತ ವಿಚಾರದಲ್ಲಿ ತಲೆಹಾಕಬಾರದು. ರಾಜ್ಯಪಾಲರ ಈ ಧೋರಣೆ ಇಡೀ ದೇಶದಲ್ಲಿ ಚರ್ಚೆಯಾಗಬೇಕು. ನಮಗೆ ಜನ ಸ್ಪಷ್ಟ ಬಹುಮತ ನೀಡಿದ್ದಾರೆ. ಅದರ ಪ್ರಕಾರ ಆಡಳಿತ ನಡೆಸುತ್ತಿದ್ದೇವೆ. ಕೇಂದ್ರ ಸರ್ಕಾರವೂ ದೇಶದಲ್ಲಿ ಅವರ ವಿರೋಧಿ ಸರ್ಕಾರಗಳ ಮೇಲೆ ಸಿಬಿಐ, ಇಡಿ ಹಾಗೂ ರಾಜ್ಯಪಾಲರ ಕಚೇರಿಗಳನ್ನ ದುರ್ಬಳಕೆ ಮಾಡಿಕೊಳ್ಳುತ್ತಿವೆ ಎಂದು ರಾಜ್ಯಪಾಲರ ನಡೆ ವಿರುದ್ಧವೂ ಮುಖ್ಯಮಂತ್ರಿ ಕಿಡಿಕಾರಿದರು.

ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ:ನಾವು ಎಂದಿಗೂ ಸಂವಿಧಾನ ಹಾಗೂ ಕಾನೂನಿನ ವಿರುದ್ಧ ನಡೆದುಕೊಂಡವರಲ್ಲ. ಯಾವ ಕಾರಣಕ್ಕೂ ಬಡವರಿಗೆ ನೀಡಿರುವ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಬಿಜೆಪಿಯವರಿಗೆ ನಮ್ಮನ್ನು ಕಂಡರೆ ಭಯ. ಅದಕ್ಕಾಗಿ ನಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಟಾರ್ಗೆಟ್‌ ಮಾಡುತ್ತಿದ್ದಾರೆ ಎಂದರು.

ಇದನ್ನೂ ಓದಿ:ಸಿಎಂ ಸಿದ್ದರಾಮಯ್ಯಗೆ ಮೈಸೂರಿನಲ್ಲಿ ಅದ್ಧೂರಿ ಸ್ವಾಗತ: 'ನಾವು ನಿಮ್ಮೊಂದಿಗೆ' ಎಂದ ಅಭಿಮಾನಿಗಳು - Grand Welcome To CM Siddaramaiah

Last Updated : Sep 27, 2024, 3:07 PM IST

ABOUT THE AUTHOR

...view details