ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಕಳ್ಳತನಕ್ಕೆ ಬಂದಿದ್ದಾಗ ತಡೆದಿದ್ದಕ್ಕೆ ಆಕ್ರೋಶಗೊಂಡ ಖದೀಮ, ಸೆಕ್ಯೂರಿಟಿ ಗಾರ್ಡ್ ಮೇಲೆ ಕಲ್ಲೆಸೆದಿರುವ ಘಟನೆ ಹೆಣ್ಣೂರು ಕ್ರಾಸ್ ಬಳಿ ಇರುವ ನಿರ್ಮಾಣ ಹಂತದ ಕಟ್ಟಡದಲ್ಲಿ ನಡೆದಿದೆ. ತನ್ನ ಮೇಲೆ ಕಳ್ಳ ಕಲ್ಲೆಸೆದಿರುವ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆಹಿಡಿದಿರುವ ಸೆಕ್ಯೂರಿಟಿ ಗಾರ್ಡ್, ವಿಡಿಯೋವನ್ನು ನಗರ ಪೊಲೀಸರಿಗೆ ಸಾಮಾಜಿಕ ಜಾಲತಾಣದಲ್ಲಿ ಟ್ಯಾಗ್ ಮಾಡಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಪೊಲೀಸರು, ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಕಬ್ಬಿಣ ಹಾಗು ಇನ್ನಿತರ ವಸ್ತುಗಳನ್ನು ಕದಿಯಲು ಬಂದಿದ್ದ ಕಳ್ಳನನ್ನು ಕಾವಲಿಗಿದ್ದ ಸೆಕ್ಯೂರಿಟಿ ಗಾರ್ಡ್ ತಡೆದಿದ್ದಾರೆ.