ಕರ್ನಾಟಕ

karnataka

ETV Bharat / state

ಕಳ್ಳಸಾಗಣೆ ಮೂಲಕ ಬಾಂಗ್ಲಾದ ಅಪ್ರಾಪ್ತೆಯರನ್ನ ಕರೆತಂದು ವೇಶ್ಯಾವಾಟಿಕೆ ; ಬೆಂಗಳೂರಲ್ಲಿ ಟೆಕ್ಕಿ ಸಹಿತ ಮೂವರ ಬಂಧನ - PROSTITUTION CASE - PROSTITUTION CASE

ಕಳ್ಳಸಾಗಣಿಕೆಯ ಮೂಲಕ ಹೆಣ್ಣು ಮಕ್ಕಳನ್ನ ಕರೆತಂದು ಹೊಂಗಸಂದ್ರದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಪೊಲೀಸರು ಬಂಧಿಸಿದ್ದಾರೆ.

PROSTITUTION
ವೇಶ್ಯಾವಾಟಿಕೆ (ETV Bharat)

By ETV Bharat Karnataka Team

Published : Sep 2, 2024, 3:27 PM IST

ಸಿಸಿಬಿಯ ಹೆಚ್ಚುವರಿ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ (ETV Bharat)

ಬೆಂಗಳೂರು : ಅಪ್ರಾಪ್ತ ಹೆಣ್ಣು ಮಕ್ಕಳನ್ನ ಕಳ್ಳಸಾಗಣಿಕೆ ಮೂಲಕ ಕರೆತಂದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನ ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಪೊಲೀಸರು ಬಂಧಿಸಿದ್ದಾರೆ.

ಬೊಮ್ಮನಹಳ್ಳಿ ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಕೈಗೊಂಡ ಜಂಟಿ ಕಾರ್ಯಾಚರಣೆಯಲ್ಲಿ ಹೊಂಗಸಂದ್ರದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಒಡಿಶಾ ಮೂಲದ ಸೂರಜ್ ಸಹಜಿ (26), ಕರೀಷ್ಮಾ ಶೇಕ್ (23) ಹಾಗೂ ಸ್ಥಳೀಯ ನಿವಾಸಿ ಸುಬ್ರಹ್ಮಣ್ಯ ಶಾಸ್ತ್ರಿ ಎಂಬಾತನನ್ನು ಬಂಧಿಸಲಾಗಿದೆ.

ಈ ಕುರಿತು ಸಿಸಿಬಿಯ ಹೆಚ್ಚುವರಿ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಮಾತನಾಡಿ, ದಾಳಿ ವೇಳೆ ಪಶ್ಚಿಮ ಬಂಗಾಳ ವಿಳಾಸದ ಇಬ್ಬರು ಬಾಲಕಿಯರು ಪತ್ತೆಯಾಗಿದ್ದು, ವಿಚಾರಣೆ ನಡೆಸಿದಾಗ ಅವರು ಬಾಂಗ್ಲಾದೇಶ ಮೂಲದವರು ಎಂದು ತಿಳಿದು ಬಂದಿದೆ. ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದ ಸುಬ್ರಹ್ಮಣ್ಯ ಶಾಸ್ತ್ರಿ ಅಪ್ರಾಪ್ತೆಯರನ್ನ ಕರೆಸಿಕೊಂಡಿದ್ದ. ಆತನ ಸೂಚನೆ ಮೇರೆಗೆ ಉಳಿದ ಆರೋಪಿಗಳಿಬ್ಬರೂ ಅಪ್ರಾಪ್ತೆಯರನ್ನ ಕರೆತಂದಿದ್ದರು. ಬಳಿಕ ಹೊಂಗಸಂದ್ರದ ಬಾಡಿಗೆ ಮನೆಯಲ್ಲಿ ಇರಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದರು. ಆರೋಪಿಗಳ ವಿರುದ್ಧ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರೆಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ :ಬೆಂಗಳೂರು: ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ; 44 ಮಹಿಳೆಯರ ರಕ್ಷಣೆ, 34 ಆರೋಪಿಗಳು ವಶಕ್ಕೆ

ABOUT THE AUTHOR

...view details