ಕರ್ನಾಟಕ

karnataka

ETV Bharat / state

ಬೆಳಗಾವಿ ಎಸ್​​ಡಿಎ ಆತ್ಮಹತ್ಯೆ ಪ್ರಕರಣ: ಮೂವರು ಆರೋಪಿಗಳಿಗೆ ಜಾಮೀನು ಮಂಜೂರು - BELAGAVI SDA SUICIDE CASE

ಎಸ್‌ಡಿಎ ಆತ್ಮಹತ್ಯೆ ಪ್ರಕರಣ ಸಂಬಂಧ ಮೂವರೂ ಆರೋಪಿಗಳಿಗೆ ಬೆಳಗಾವಿಯ 10ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ.

sda suicide
ಸಾಂದರ್ಭಿಕ ಚಿತ್ರ (ETV Bharat)

By ETV Bharat Karnataka Team

Published : Nov 14, 2024, 7:54 PM IST

ಬೆಳಗಾವಿ: ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲೇ ಎಸ್‌ಡಿಎ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರೂ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಬೆಳಗಾವಿ 10ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

ಸಚಿವರ ಆಪ್ತ ಸಹಾಯಕ ಸೋಮು ದೊಡವಾಡ, ತಹಶೀಲ್ದಾರ್ ಬಸವರಾಜ ನಾಗರಾಳ, ತಹಶೀಲ್ದಾರ್ ಕಚೇರಿಯ ಎಫ್‌ಡಿಎ ಅಶೋಕ ಕಬ್ಬಲಿಗೇರ‌ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ.

ತಹಶೀಲ್ದಾರ್ ಬಸವರಾಜ ನಾಗರಾಳ ಪರ ನ್ಯಾಯವಾದಿ ರವಿರಾಜ ಪಾಟೀಲ ವಕಾಲತ್ತು ವಹಿಸಿದ್ದರು. ಎಫ್​ಡಿಎ ಅಶೋಕ ಕಬ್ಬಲಿಗೇರ ಪರ ವಕೀಲ ಆರ್. ಜಿ. ಪಾಟೀಲ, ಸೋಮು ದೊಡವಾಡ ಪರ ವಕೀಲೆ ಪದ್ಮಾ ಅವರು ವಾದ ಮಂಡಿಸಿದ್ದರು.

ನವೆಂಬರ್​​ 5ರಂದು ತಹಶೀಲ್ದಾರ್​ ಕಚೇರಿಯ ಕೊಠಡಿಯಲ್ಲಿಯೇ ಎಸ್‌ಡಿಎ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾಯುವ ಮುನ್ನ ಮೂವರ ಹೆಸರನ್ನು ವಾಟ್ಸಪ್‌ ಮೂಲಕ ಸಂದೇಶ ಕಳುಹಿಸಿ, ನನ್ನ ಸಾವಿಗೆ ಇವರೇ ಕಾರಣ ಎಂದು ತಿಳಿಸಿದ್ದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಖಡೇಬಜಾರ ಪೊಲೀಸ್ ಠಾಣೆಯಲ್ಲಿ ಈ ಮೂವರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ:ಕಾರು ಪಾರ್ಕಿಂಗ್ ವಿಚಾರಕ್ಕೆ ಗಲಾಟೆ: ವೃದ್ಧನಿಗೆ ಚಾಕುವಿನಿಂದ ಚುಚ್ಚಿದ ಆರೋಪಿ ಬಂಧನ

ABOUT THE AUTHOR

...view details