ಬೆಂಗಳೂರು : ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್. ಡಿ ರೇವಣ್ಣ ಅವರ ಆಪ್ತ ಸಹಾಯಕ ಸತೀಶ್ ಬಾಬುಗೆ ಸಾಥ್ ನೀಡಿದ್ದ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಮಧು, ಮನು ಹಾಗೂ ಸುಜಯ್ ಎಂಬಾತನಿಗೆ ನ್ಯಾಯಾಂಗ ಬಂಧನ ವಿಧಿಸಿ 42ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು ಆದೇಶಿಸಿದ್ದಾರೆ. ಮತ್ತೊಂದೆಡೆ ನ್ಯಾಯಾಂಗ ಬಂಧನದಲ್ಲಿರುವ ಸತೀಶ್ ಬಾಬುನನ್ನ ವಿಚಾರಣೆಗೆ ನಾಲ್ಕು ದಿನಗಳ ಕಾಲ ಎಸ್ಐಟಿ ವಶಕ್ಕೆ ಪಡೆದಿದೆ.