ಚಾಮರಾಜನಗರ:ಟಿಪ್ಪರ್ ಲಾರಿ ಮತ್ತು ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಕೇರಳ ಮೂಲದ ಮೂವರು ಮೃತಪಟ್ಟ ಘಟನೆ ಗುಂಡ್ಲುಪೇಟೆ ಪಟ್ಟಣದ ಹೊರ ವಲಯದ ಕೇರಳ ರಸ್ತೆಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಮೃತರೆಲ್ಲರೂ ಒಂದೇ ಕುಟುಂಬದರು ಎಂದು ಹೇಳಲಾಗುತ್ತಿದೆ.
ಒಂದೇ ಬೈಕ್ನಲ್ಲಿ ಕೇರಳದಿಂದ ಗುಂಡ್ಲುಪೇಟೆ ಕಡೆಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಕೂತನೂರು ಗುಡ್ಡದಿಂದ ಕಲ್ಲು ತುಂಬಿಕೊಂಡು ಬರುತ್ತಿದ್ದ ಕೆ.ಎ.11-ಬಿ 8497 ನೋಂದಣಿಯ ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರನ ಮೇಲೆ ಲಾರಿ ಹರಿದಿದೆ. ಜೊತೆಗೆ ಬೈಕ್ ಸಮೇತ ಅಡಿಯಲ್ಲಿ ಸಿಲುಕಿಕೊಂಡಿದ್ದ ಇಬ್ಬರನ್ನು 300 ಮೀಟರ್ನಷ್ಟು ದೂರಕ್ಕೆ ಲಾರಿ ಎಳೆದುಕೊಂಡು ಬಂದಿದೆ ಎಂದು ತಿಳಿದುಬಂದಿದೆ.