ಕರ್ನಾಟಕ

karnataka

ETV Bharat / state

ಬೈಕ್​ಗೆ ಲಾರಿ ಡಿಕ್ಕಿ: ಹಾವೇರಿಯಲ್ಲಿ ಒಂದೇ ಕುಟುಂಬದ ಮೂವರು ಸಾವು - ಬೈಕ್​ಗೆ ಲಾರಿ ಡಿಕ್ಕಿ

ಬೈಕ್​ಗೆ ಲಾರಿ ಡಿಕ್ಕಿ ಹೊಡೆದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.

ಬೈಕ್​ಗೆ ಲಾರಿ ಡಿಕ್ಕಿ: ಒಂದೇ ಕುಟುಂಬದ ಮೂವರು ಸಾವು
ಬೈಕ್​ಗೆ ಲಾರಿ ಡಿಕ್ಕಿ: ಒಂದೇ ಕುಟುಂಬದ ಮೂವರು ಸಾವು

By ETV Bharat Karnataka Team

Published : Feb 27, 2024, 9:30 PM IST

ಹಾವೇರಿ: ಬೈಕ್​ಗೆ ಹಿಂದಿನಿಂದ ಲಾರಿ ಡಿಕ್ಕಿಯಾಗಿ ಮೂವರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬ್ಯಾಡಗಿ ತಾಲೂಕಿನ‌ ಮೋಟೆಬೆನ್ನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ನಡೆಯಿತು. ಸಾವಿಗೀಡಾದವರಲ್ಲಿ ಮಗು ಸೇರಿದೆ. ಮತ್ತೊಂದು ಮಗುವಿನ‌‌ ಸ್ಥಿತಿ ಗಂಭೀರವಾಗಿದೆ.

ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಬೈಕ್‌ಗೆ ವೇಗವಾಗಿ ಬಂದ ಲಾರಿ ಡಿಕ್ಕಿಯಾಗಿ ಅವಘಡ ಸಂಭವಿಸಿದೆ. ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಮೃತರ ಗುರುತು ಪತ್ತೆ ಹಚ್ಚಲಾಗುತ್ತಿದೆ. ಘಟನಾ ಸ್ಥಳಕ್ಕೆ ಬ್ಯಾಡಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಲಾರಿ-ಖಾಸಗಿ ಬಸ್​ ಅಪಘಾತ:ಲಾರಿ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಶೃಂಗೇರಿ ತಾಲೂಕಿನ ಕೆರೆಕಟ್ಟೆ ಸಮೀಪದ ಮಾತೊಳ್ಳಿ ಬಳಿ ನಡೆದಿದೆ. ಸ್ಥಳೀಯರು ತಕ್ಷಣ ಆಂಬ್ಯುಲೆನ್ಸ್‌ಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಆದರೆ ಎರಡು ಗಂಟೆಗಳ ನಂತರ ಆಂಬ್ಯುಲೆನ್ಸ್ ಸ್ಥಳಕ್ಕೆ ಬಂದಿದ್ದು, ಗಾಯಾಳುಗಳು ಪರದಾಟ ನಡೆಸಿದ್ದಾರೆ. ಬಳಿಕ ಪೊಲೀಸರ ವಾಹನದಲ್ಲೇ ಶೃಂಗೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರೆ ಮಾಡಿದರೂ ಸಕಾಲಕ್ಕೆ ಬಾರದ ಆಂಬ್ಯುಲೆನ್ಸ್ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತವಾಯಿತು. ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕಲಬುರಗಿ: ನಿಂತಿದ್ದ ಲಾರಿಗೆ ಬೈಕ್​ ಡಿಕ್ಕಿ ಹೊಡೆದು ಮಾವ, ಸೊಸೆ ದುರ್ಮರಣ

ABOUT THE AUTHOR

...view details