ಕರ್ನಾಟಕ

karnataka

ETV Bharat / state

ರಾಮನಗರ: ಕಾರು - ಲಾರಿ ಮಧ್ಯೆ ಅಪಘಾತ; ಮೂವರು ಸ್ಥಳದಲ್ಲೇ ಸಾವು - CAR LORRY ACCIDENT

ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮೃತಪಟ್ಟ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.

accident
ಅಪಘಾತಕ್ಕೀಡಾದ ವಾಹನಗಳು (ETV Bharat)

By ETV Bharat Karnataka Team

Published : Nov 9, 2024, 10:04 PM IST

ರಾಮನಗರ:ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಹುಲಿಬೆಲೆ ಗ್ರಾಮದ ಬಳಿ ಶನಿವಾರ ನಡೆದಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದೆ.

ಅಪಘಾತದ ರಭಸಕ್ಕೆ ಮೃತದೇಹಗಳು ಕಾರಿನಲ್ಲಿಯೇ ಛಿದ್ರವಾಗಿವೆ. ಹೀಗಾಗಿ, ಮೃತರ ಗುರುತು ಇನ್ನೂ ಕೂಡ ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಕನಕಪುರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕನಕಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಕನಕಪುರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ:ಕಲಬುರಗಿ: ಪಿಕಪ್ - ಕಾರು ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

ಪ್ರತ್ಯೇಕ ಘಟನೆ, ನಾಲ್ವರು ಸಾವು:ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಬಳಿ ಶನಿವಾರ ನಸುಕಿನ ಜಾವ ಸಂಭವಿಸಿತ್ತು.

ಘಟನೆಯಲ್ಲಿ ಹೈದರಾಬಾದ್ ಮೂಲದ ಭಾರ್ಗವ ಕೃಷ್ಣ (55), ಅವರ ಪತ್ನಿ ಸಂಗೀತಾ (45), ಪುತ್ರ ಉತ್ತಮ ರಾಘವನ್ (28) ಹಾಗೂ ಕಾರು ಚಾಲಕ ಮೃತಪ್ಟಟಿದ್ದಾರೆ. ಮೃತರೆಲ್ಲರೂ ಗಾಣಗಾಪುರದ ದತ್ತಾತ್ರೆಯ ದೇವರ ದರ್ಶನಕ್ಕೆ ತೆರಳುತ್ತಿದ್ದರು ಎನ್ನಲಾಗುತ್ತಿದೆ.

ಇದನ್ನೂ ಓದಿ:ಭೀಕರ ರಸ್ತೆ ಅಪಘಾತ: ಐವರು ಸಾವು

ABOUT THE AUTHOR

...view details