ಬಳ್ಳಾರಿ:ನೀರಿನ ದೊಡ್ಡ ಹೊಂಡಕ್ಕೆ ಬಿದ್ದು ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬಳ್ಳಾರಿಯ ಜಿಂದಾಲ್ ಕಾರ್ಖಾನೆಯಲ್ಲಿ ನಡೆದಿದೆ. ಸ್ಟೀಲ್ ಮೆಟೀರಿಯಲ್ ತಂಪಾಗಿಸುವ ನೀರಿನ ಹೊಂಡಕ್ಕೆ ನೀರು ಬಿಡಲಾಗುತ್ತಿತ್ತು.
ಈ ವೇಳೆ ಪೈಪಲೈನ್ ಚೆಕ್ ಮಾಡುತ್ತಿದ್ದ ಮೂವರು ಆಯತಪ್ಪಿ ನೀರಿನ ರಭಸಕ್ಕೆ ಸಿಲುಕಿಕೊಂಡು ಹೊಂಡಕ್ಕೆ ಬಿದ್ದಿದ್ದಾರೆ. ಆಳವಾದ ಹೊಂಡದಲ್ಲಿ ಬಿದ್ದ ಪರಿಣಾಮ ಮೂವರು ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಜಿಂದಾಲ್ ಸಂಜೀವಿನಿ ಆಸ್ಪತ್ರೆಗೆ ಸೇರಿಸಿದ್ದರೂ ಸಹ ಚಿಕಿತ್ಸೆ ಫಲಕಾರಿಯಾಗದೇ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತರನ್ನು ಭುವನಹಳ್ಳಿ ಮೂಲದ ಜೆಡೆಪ್ಪ, ಬೆಂಗಳೂರಿನ ಸುಶಾಂತ್, ಚೆನ್ನೈ ಮೂಲದ ಮಹಾದೇವನ್ ಎಂದು ಗುರುತಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ತೋರಣಗಲ್ಲು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ನಿಖರವಾದ ಕಾರಣ ಏನು ಎಂಬುದರ ಬಗ್ಗೆ ಪೊಲೀಸರಿಂದ ತನಿಖೆ ನಡೆಯುತ್ತಿದೆ.
ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸ್ಥಳದಲ್ಲೇ ಸಾವು:ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸ್ಥಳದಲ್ಲೇ ಸಾವಿಗೀಡಾದ ಘಟನೆ ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ. ಚಿಕ್ಕೆನಕೊಪ್ಪ ಗ್ರಾಮದ ಈರಪ್ಪ ಕುರಿ(55) ಮೃತ ವ್ಯಕ್ತಿಯಾಗಿದ್ದು, ವಿಂಡ್ ಪವರ್ ಕಂಪನಿ ನಿರ್ಲಕ್ಷ್ಯದಿಂದಲೇ ವ್ಯಕ್ತಿ ಸಾವು ಆಂತ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ