ತುಮಕೂರು:ಗಣೇಶನ ನಿಮಜ್ಜನಕ್ಕೆ ಹೋಗಿದ್ದ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾರಸಂದ್ರ ಗ್ರಾಮದಲ್ಲಿ ನಡೆದಿದೆ. ಮಾರಸಂದ್ರ ಸಮೀಪದ ರಂಗನಹಟ್ಟಿ ಕೆರೆಯಲ್ಲಿ ಘಟನೆ ನಡೆದಿದ್ದು, ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಅಪ್ಪ - ಮಕ್ಕಳು ಜಲಸಮಾಧಿಯಾಗಿದ್ದಾರೆ. ಮೃತಪಟ್ಟವರನ್ನು ರೇವಣ್ಣ (50), ಪುತ್ರರಾದ ಶರತ್ (20) ಹಾಗೂ ದಯಾನಂದ (28) ಎಂದು ಗುರುತಿಸಲಾಗಿದೆ. ಮೃತ ದಯಾನಂದ್ಗೆ ಇತ್ತೀಚೆಗಷ್ಟೇ ಮದುವೆ ಆಗಿತ್ತು ಎಂದು ತಿಳಿದುಬಂದಿದೆ.