ಮಂಗಳೂರು: ಮಹಾನಗರ ಪಾಲಿಕೆಯ ಕಚೇರಿಯ ಮುಂದೆ ನಡೆದ ಕಾಂಗ್ರೆಸ್ ಪ್ರತಿಭಟನೆ ವೇಳೆ ಖಾಸಗಿ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ ಮೂವರನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಶಾಹುಲ್ ಹಮೀದ್, ಅನ್ವರ್ ಮತ್ತು ಕಿಶೋರ್ ಶೆಟ್ಟಿ ಬಂಧಿತರು.
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರ ಅನುಮತಿ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಈ ವೇಳೆ ನಗರ ಪಾಲಿಕೆ ಕಚೇರಿ ಮುಂಭಾಗದ ಟ್ರಾಫಿಕ್ ಸಿಗ್ನಲ್ ಬಳಿ ಕೆಎ 19 ಸಿ 7266 ನೋಂದಣಿ ಸಂಖ್ಯೆಯ ಬಸ್ ಮೇಲೆ 10 ರಿಂದ 15 ಮಂದಿ ದುಷ್ಕರ್ಮಿಗಳ ತಂಡ ಕಲ್ಲು ತೂರಾಟ ನಡೆಸಿದ್ದು, ಮುಂಭಾಗಕ್ಕೆ ಹಾನಿಯಾಗಿದ್ದು, ಗಾಜು ಪುಡಿಯಾಗಿದೆ.