ಕರ್ನಾಟಕ

karnataka

ETV Bharat / state

ಬೆಂಗಳೂರು: ರೈಲು ಡಿಕ್ಕಿ ಹೊಡೆದು ಆಂಧ್ರದ ಮೂವರು ಸಾವು - Three People Died - THREE PEOPLE DIED

ರೈಲು ಡಿಕ್ಕಿ ಹೊಡೆದು ಮೂವರು ಯುವಕರು ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ.

ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

By ETV Bharat Karnataka Team

Published : Apr 25, 2024, 2:52 PM IST

ಬೆಂಗಳೂರು: ಯಶವಂಶಪುರ-ಕಣ್ಣೂರು ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ಮೂವರು ಸಾವನ್ನಪ್ಪಿರುವ ಘಟನೆ ಬೈಯ್ಯಪ್ಪನಹಳ್ಳಿ ರೈಲ್ವೆ ಪೊಲೀಸ್​ ಠಾಣಾ ವ್ಯಾಪ್ತಿಯ ಮಾರತ್ ಹಳ್ಳಿ ಬಳಿ ಬುಧವಾರ ರಾತ್ರಿ ನಡೆದಿದೆ. ಆಂಧ್ರದ ಚಿತ್ತೂರಿನ ಶಶಿಕುಮಾರ್, ಲೊಕೇಶ್ ಹಾಗು ಮತ್ತೋರ್ವ ವ್ಯಕ್ತಿ ಮೃತರೆಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ರೈಲ್ವೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದರು. ಮೃತಪಟ್ಟ ಯುವಕರು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರಾ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ABOUT THE AUTHOR

...view details