ಕರ್ನಾಟಕ

karnataka

ETV Bharat / state

ಸಾಲಬಾಧೆ : ಮಂಡ್ಯದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ - FAMILY DEATH

ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

three-people-from-same-family-die-in-mandya
ರತ್ನಮ್ಮ, ಮಾಸ್ತಪ್ಪ (ETV Bharat)

By ETV Bharat Karnataka Team

Published : Feb 24, 2025, 5:09 PM IST

ಮಂಡ್ಯ :ಸಾಲಬಾಧೆ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ತಾಲೂಕಿನ ಚಂದಗಾಲು ಗ್ರಾಮದಲ್ಲಿ ಸೋಮವಾರ ನಡೆದಿದೆ.

ಶ್ರೀರಂಗಪಟ್ಟಣದ ಗಂಜಾಂ ನಿವಾಸಿ ಮಾಸ್ತಪ್ಪ(65), ರತ್ನಮ್ಮ(45) ಹಾಗೂ ಅವರ ಅಪ್ರಾಪ್ತ ವಯಸ್ಸಿನ ಮಗಳು ಆತ್ಮಹತ್ಯೆ ಮಾಡಿಕೊಂಡವರು. ಮಾಸ್ತಪ್ಪ ಆಟೋ ಓಡಿಸಿ ಜೀವನ ಸಾಗಿಸುತ್ತಿದ್ದರು. ಸುಮಾರು 12 ಲಕ್ಷ ರೂ.ಸಾಲ ಮಾಡಿಕೊಂಡಿದ್ದು, ಅದನ್ನು ತೀರಿಸಲು ಸಾಧ್ಯವಾಗದೆ ಮನನೊಂದಿದ್ದರು ಎಂದು ತಿಳಿದುಬಂದಿದೆ.

ಇಂದು ಮಧ್ಯಾಹ್ನ ಮಾಸ್ತಪ್ಪ ಶ್ರೀರಂಗಪಟ್ಟಣದ ಗಂಜಾಂನಿಂದ ಪತ್ನಿ ರತ್ನಮ್ಮ, ಮಗಳ ಜೊತೆಗೆ ಆಟೋದಲ್ಲಿ ಮಂಡ್ಯ ತಾಲೂಕಿನ ಚಂದಗಾಲು ಗ್ರಾಮಕ್ಕೆ ಬಂದು ಸಾವಿನ ಸಾವಿಗೆ ಶರಣಾಗಿದ್ದಾರೆ. ಇಬ್ಬರ ಮೃತದೇಹ ಯಲಿಯೂರು-ಸುಂಡಹಳ್ಳಿ ಬಳಿ ವಿಸಿ ನಾಲೆಯಲ್ಲಿ ಸಿಕ್ಕಿದ್ದು, ಇನ್ನೊಬ್ಬರ ಮೃತದೇಹದ ಪತ್ತೆಗೆ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ಮುಂದುವರೆಸಿದ್ದಾರೆ.

ಇದನ್ನೂ ಓದಿ:ಹಾವೇರಿ : ಕೆರೆಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು

ಘಟನೆ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಸ್ಥಳಕ್ಕೆ ಎಸ್​​ಪಿ ಮಲ್ಲಿಕಾರ್ಜುನ ಬಾಲದಂಡಿ ಸೇರಿ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಆತ್ಮಹತ್ಯೆ ಪರಿಹಾರವಲ್ಲ;ಎಲ್ಲಾ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಆತ್ಮಹತ್ಯೆಯ ಆಲೋಚನೆಗಳನ್ನು ಹೊಂದಿದ್ದರೆ, ಅಥವಾ ಸ್ನೇಹಿತರ ಬಗ್ಗೆ ಚಿಂತೆ ಮಾಡುತ್ತಿದ್ದರೆ ಅಥವಾ ಭಾವನಾತ್ಮಕ ಬೆಂಬಲದ ಅಗತ್ಯವಿದ್ದರೆ, ಯಾರಾದರೂ ನಿಮ್ಮ ನೋವನ್ನು ಕೇಳಲು ಇರುತ್ತಾರೆ. ಅದಕ್ಕಾಗಿ ಸ್ನೇಹ ಫೌಂಡೇಶನ್‌ಗೆ ಕರೆ ಮಾಡಿ - 04424640050 (24x7 ಲಭ್ಯವಿದೆ) ಅಥವಾ iCall, ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್‌ನ ಸಹಾಯವಾಣಿ - 9152987821, ಇದು ಸೋಮವಾರದಿಂದ ಶನಿವಾರದವರೆಗೆ ಬೆಳಗ್ಗೆ 8 ರಿಂದ ರಾತ್ರಿ 10ರ ವರೆಗೆ ಲಭ್ಯವಿರುತ್ತದೆ).

ಇದನ್ನೂ ಓದಿ:ದೂರು ನೀಡಲು ಬಂದ ಅಪ್ರಾಪ್ತ ಸಂತ್ರಸ್ತೆ ಮೇಲೆ ಆತ್ಯಾಚಾರ ಆರೋಪ : ಕಾನ್ಸ್​​ಟೇಬಲ್​ ಸೇರಿ ಇಬ್ಬರ ಬಂಧನ

ABOUT THE AUTHOR

...view details