ಬಂಟ್ವಾಳ : ಬಿಸಿಲಿನ ತಾಪದಿಂದ ಕೇರಳ ರಾಜ್ಯ ರಸ್ತೆ ನಿಗಮದ ಮಲಬಾರ್ ಬಸ್ಸಿನ ಮುಂಭಾಗದ ಗಾಜು ಒಡೆದ ಪರಿಣಾಮ, ಇಬ್ಬರು ಮಕ್ಕಳು ಸೇರಿ ಚಾಲಕ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಉರಿಮಜಲು ಎಂಬಲ್ಲಿ ನಡೆದಿದೆ.
ಪುತ್ತೂರಿನಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಮುಂಭಾಗದ ಗಾಜು ಒಡೆದಿದೆ. ಬಸ್ನ ಮುಂಭಾಗದ ಸೀಟಿನಲ್ಲಿ ಕುಳಿತಿದ್ದ ಇಬ್ಬರು ಬಾಲಕರು ಹಾಗೂ ಬಸ್ ಚಾಲಕ ಗಾಯಗೊಂಡವರು. ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಬಾಲಕ ಕಾಸರಗೋಡು ನೆಲ್ಲಿಕಟ್ಟೆಯವನು ಎಂದು ತಿಳಿದುಬಂದಿದೆ.
ಇತ್ತೀಚಿನ ಘಟನೆಗಳು :ಕಬಕ ಹೊರವಲಯದ ಉರಿಮಜಲು ಎಂಬಲ್ಲಿ ಆಟೋ ಚಾಲಕರೊಬ್ಬರು ಮಲಗಿದ್ದಲ್ಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೇ 3ರಂದು ಮಧ್ಯಾಹ್ನ ಮಸೀದಿಯಲ್ಲಿ ನಮಾಜ್ ಮುಗಿಸಿ ಮನೆಗೆ ಬಂದಿದ್ದ ಅಶ್ರಫ್ (38) ವಿಶ್ರಾಂತಿಗಾಗಿ ಬಾಗಿಲು ಹಾಕಿಕೊಂಡು ಮಲಗಿದ್ದರು. ಸಂಜೆ ಅವರ ಪತ್ನಿ ಮನೆಗೆ ಬಂದಾಗ ಬಾಗಿಲು ಹಾಕಿತ್ತು. ಇತರರಿಗೆ ವಿಷಯ ತಿಳಿಸಿ ಬಾಗಿಲು ತೆರೆದಾಗ ಅಶ್ರಫ್ ಮಲಗಿದ್ದಲ್ಲೇ ಮೃತಪಟ್ಟಿದ್ದರು.