ಹುಬ್ಬಳ್ಳಿ:ಲಾರಿಯೊಂದಕ್ಕೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಗದಗ ರಸ್ತೆಯ ಐಟಿಸಿ ಗೋಡೌನ್ ಬಳಿಯಲ್ಲಿ ಶನಿವಾರ ತಡರಾತ್ರಿ ನಡೆದಿದೆ.
ಮೈನ್ಸ್ ತುಂಬಿದ್ದ ಲಾರಿ ಮುಂದೆ ಹೊರಟಿದ್ದ ಕಾರು ಚಾಲಕ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮವಾಗಿ ಲಾರಿ ಚಾಲಕ ಬ್ರೇಕ್ ಹಾಕಿದ್ದಾನೆ. ಈ ವೇಳೆ ಲಾರಿ ಹಿಂದೆ ಬರುತ್ತಿದ್ದ ಕ್ಯಾಂಟರ್ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಕ್ಯಾಂಟರ್ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಗಾಜುಗಳು ಒಡೆದು ಜಖಂಗೊಂಡಿತ್ತು. ಮೂವರ ಅರ್ಧ ದೇಹಗಳು ಲಾರಿ ಅಡಿಯಲ್ಲಿ ಸಿಲುಕಿದ್ದ ಸಂದರ್ಭದಲ್ಲಿ ರಕ್ಷಿಸಲು ಸಾರ್ವಜನಿಕರು ಹರಸಾಹಸಪಟ್ಟರು.