ಶಿವಮೊಗ್ಗ: ಚಲಿಸುತ್ತಿದ್ದ ಬೈಕ್ ಮೇಲೆ ಮರದ ಕೊಂಬೆ ಬಿದ್ದ ಪರಿಣಾಮ ಒಂದೇ ಕುಟುಂಬದ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಇಲ್ಲಿಯ ಗೊಂದಿ ಚಟ್ನಳ್ಳಿ ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ-ಹೊನ್ನಾಳಿ ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ಭದ್ರಾವತಿ ತಾಲೂಕು ಸನ್ಯಾಸಿ ಕೊಡಮಗ್ಗಿ ಗ್ರಾಮದ ಮಹಮ್ಮದ್ ಶಫಿವುಲ್ಲಾ(55), ಇವರ ಸೊಸೆ ಪ್ಯಾರಿ ಬೀ(22) ಹಾಗೂ 1 ವರ್ಷದ ಮಗು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಶಿವಮೊಗ್ಗ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರದ ಕೊಂಬೆ, ಮಗು ಸೇರಿ ಮೂವರಿಗೆ ಗಂಭೀರ ಗಾಯ - ಶಿವಮೊಗ್ಗ ರಸ್ತೆ ಅಪಘಾತ
ಬೈಕ್ ಮೇಲೆ ಮರದ ಕೊಂಬೆ ಬಿದ್ದು ಒಂದೇ ಕುಟುಂಬದ ಮೂವರು ಗಾಯಗೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
Published : Feb 13, 2024, 7:01 PM IST
ಈ ಮೂವರು ಬೈಕ್ನಲ್ಲಿ ಹೊಳಲೂರು ಗ್ರಾಮದ ಮೂಲಕ ಶಿವಮೊಗ್ಗ ನಗರಕ್ಕೆ ಬರುವಾಗ ಗೊಂದಿ ಚಟ್ನಳ್ಳಿ ಗ್ರಾಮದ ರಸ್ತೆ ಪಕ್ಕದಲ್ಲಿದ್ದ ಬೃಹತ್ ಮರದ ಕೊಂಬೆ ತುಂಡಾಗಿ ಏಕಾಏಕಿ ಬೈಕ್ ಮೇಲೆ ಬಿದ್ದಿದೆ. ಇದರಿಂದ ಬೈಕ್ ಮೇಲಿಂದ ಮೂವರು ಕೆಳಬಿದ್ದು ಗಾಯಗೊಂಡಿದ್ದಾರೆ. ಘಟನೆ ವೇಳೆ ಬೈಕ್ನ ಹಿಂದೆ ಲಾರಿಕೂಡ ಬರುತ್ತಿತ್ತು. ಆದರೆ ಲಾರಿ ಮೇಲೂ ಮರದ ಕೊಂಬೆ ಬಿದ್ದಿದ್ದರಿಂದ ಚಾಲಕ ಕೂಡಲೇ ಬ್ರೇಕ್ ಹಾಕಿದ್ದಾನೆ. ಇದರಿಂದ ದೊಡ್ಡ ದುರಂತ ತಪ್ಪಿದಂತಾಗಿದೆ. ಕೂಡಲೇ ಅಲ್ಲಿದ್ದ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನೆಯ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ.
ಇದನ್ನೂ ಓದಿ:ಶಿಕಾರಿಪುರ: ಹೋರಿ ಬೆದರಿಸುವ ಸ್ಪರ್ಧೆ, ಹೋರಿ ತಿವಿದು ಯುವಕ ಸಾವು