ಕರ್ನಾಟಕ

karnataka

ETV Bharat / state

ಮಂಡ್ಯ: ಭೀಕರ ಅಪಘಾತ, ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸಾವು - TRAGIC CAR ACCIDENT

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬೋಸೇಗೌಡನದೊಡ್ಡಿ ಬಳಿ ಭೀಕರ ಅಪಘಾತ ಸಂಭವಿಸಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವನಿಗೆ ಗಂಭೀರ ಗಾಯವಾಗಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

TRAGIC CAR ACCIDENT
ಅಪಘಾತದಲ್ಲಿ ನಜ್ಜುಗುಜ್ಜಾದ ಕಾರು (ETV Bharat)

By ETV Bharat Karnataka Team

Published : 15 hours ago

Updated : 15 hours ago

ಮಂಡ್ಯ: ನೆಲಮಂಗಲ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಉದ್ಯಮಿ ಸೇರಿ ಒಂದೇ ಕುಟುಂಬದ 6 ಮಂದಿ ಸಾವನ್ನಪ್ಪಿದ್ದರೆ, ಇತ್ತ ಮಂಡ್ಯ ಜಿಲ್ಲೆಯಲ್ಲಿ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಳವಳ್ಳಿ ತಾಲೂಕಿನ ಬೋಸೇಗೌಡನ ದೊಡ್ಡಿ ಗ್ರಾಮದ ಬಳಿ ನಡೆದಿದೆ.

ಬೆಂಗಳೂರಿನ ಪ್ರಣವ್, ಆಕಾಶ್, ಆದರ್ಶ್ ಮೃತ ವಿದ್ಯಾರ್ಥಿಗಳು. ಪೃಥ್ವಿ ಎಂಬ ಮತ್ತೊಬ್ಬ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತರು ಮೈಸೂರು ಜಿಲ್ಲೆ ತಲಕಾಡು ಪ್ರವಾಸಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಬಸ್ ಓವರ್ ಟೇಕ್ ಮಾಡುವಾಗ ಎದುರಿಗೆ ಬರುತ್ತಿದ್ದ ಲಾರಿ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಮೃತದೇಹಗಳನ್ನು ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಮಳವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಇದನ್ನೂ ಓದಿ:ನೆಲಮಂಗಲದಲ್ಲಿ ಭೀಕರ ಅಪಘಾತ: ಕಾರಿನ ಮೇಲೆ ಕಂಟೇನರ್ ಪಲ್ಟಿಯಾಗಿ ಉದ್ಯಮಿ ಸೇರಿ ಒಂದೇ ಕುಟುಂಬದ 6 ಜನ ಸಾವು - CONTAINER OVERTURNS ON CAR

Last Updated : 15 hours ago

ABOUT THE AUTHOR

...view details