ಕಲಬುರಗಿ:ರಸ್ತೆ ಬದಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸವಾರರು ಸಾವಿಗೀಡಾದ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ಬಳಿ ಬುಧವಾರ ರಾತ್ರಿ ಸಂಭವಿಸಿದೆ.
ಗುರೂಜಿ ತಾಂಡಾ ನಿವಾಸಿಗಳಾದ ಅರ್ಜುನ್ ರಾಠೋಡ್, ರೋಹಿತ್ ಹಾಗೂ ಕೃಷ್ಣ ಎಂಬುವರು ಲಾಡ್ಲಾಪುರ ಗ್ರಾಮದಿಂದ ತಾಂಡಾಕ್ಕೆ ಹೋಗುತ್ತಿರುವಾಗ ಘಟನೆ ನಡೆದಿದೆ. ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗಳಿಂದ ಮೂವರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರತ್ಯೇಕ ಪ್ರಕರಣ - ಬ್ಯಾಂಕ್ ಕಳ್ಳತನಕ್ಕೆ ಯತ್ನಿಸಿದ ಖದೀಮನ ಬಂಧನ:ಮಧ್ಯರಾತ್ರಿ ಬ್ಯಾಂಕಿನ ಮುಂಬಾಗಿಲಿನ ಕೀಲಿ ಮುರಿದು ಕಳ್ಳತನಕ್ಕೆ ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಿಂಚೋಳಿ ತಾಲೂಕಿನ ಸುಲೇಪೇಟ ಠಾಣೆ ವ್ಯಾಪ್ತಿಯ ನಿಡಗುಂದಾ ಗ್ರಾಮದಲ್ಲಿ ಘಟನೆ ನಡೆದಿದೆ. ಕರ್ಚಖೇಡ ಗ್ರಾಮದ ತುಕ್ಕಪ್ಪ ಕೆಂಚೇರ(26) ಬಂಧಿತ ಆರೋಪಿ. ಬ್ಯಾಂಕ್ನಲ್ಲಿನ ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ, ಘಟನೆ ನಡೆದ 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿಯು ಕಳ್ಳತನಕ್ಕೆ ಬಳಸಿದ್ದ, ಕೊಡಲಿ, ಕಬ್ಬಿಣದ ಹಾರೆ, ಹತೋಡಿ, ಕಟಿಂಗ್ ಪ್ಲೇಯರ್, ಸ್ಕೂ ಡ್ರೈವರ್, ಚಾಕು, ಹಗ್ಗ, ಒಂದು ವೆನಿಟಿ ಬ್ಯಾಗ್ ಹಾಗೂ ದ್ವಿಚಕ್ರ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸುಲೇಪೇಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಹುಬ್ಬಳ್ಳಿ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ: ಅಪಾಯದಿಂದ ಪಾರಾದ ಕುಟುಂಬ