ಕರ್ನಾಟಕ

karnataka

ETV Bharat / state

ಮೈಸೂರು: ಕಬಿನಿ ಹಿನ್ನೀರಿನ ರೆಸಾರ್ಟ್ ಪಕ್ಕದಲ್ಲಿ ಹುಲಿ ಸೆರೆ - Tiger Rescued - TIGER RESCUED

ಆನೆಗಳ ಸಹಾಯದಿಂದ ಕೂಂಬಿಂಗ್ ಕಾರ್ಯಾಚರಣೆ ನಡೆಸಿ ಹುಲಿಯನ್ನು ಸೆರೆ ಹಿಡಿಯಲಾಗಿದೆ.

ಹುಲಿ ಸೆರೆಗೆ ಕಾರ್ಯಾಚರಣೆ
ಹುಲಿ ಸೆರೆಗೆ ಕಾರ್ಯಾಚರಣೆ (Etv Bharat)

By ETV Bharat Karnataka Team

Published : May 6, 2024, 12:09 PM IST

ಮೈಸೂರು:ಹೆಚ್.ಡಿ.ಕೋಟೆ ತಾಲೂಕಿನ ಮಳಲಿ ಗ್ರಾಮದ ಕಬಿನಿ ಹಿನ್ನೀರಿನ ಸಮೀಪದ ಡಿಸ್ಕವರಿ ವಿಲೇಜ್ ರೆಸಾರ್ಟ್ ಪಕ್ಕದಲ್ಲಿ ಕಾಣಿಸಿಕೊಂಡ ಹುಲಿಯನ್ನು ಭಾನುವಾರ ಸಾಕಾನೆಗಳ ಸಹಾಯದಿಂದ ಕೂಂಬಿಂಗ್ ಕಾರ್ಯಾಚರಣೆ ನಡೆಸಿ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

ಹುಲಿ ನೋಡಲು ಬಂದ ಜನ (Etv Bharat)

ಮಳಲಿ ಗ್ರಾಮದ ಸುಲೋಚನ ಎಂಬವರ ಬಾಳೆತೋಟದಲ್ಲಿ ಹುಲಿ ಕಾಣಿಸಿಕೊಂಡು ಸ್ಥಳೀಯ ಜನರಲ್ಲಿ ಆತಂಕ ಮೂಡಿಸಿತ್ತು. ಕೂಡಲೇ ಗ್ರಾಮಸ್ಥರು ನಾಗರಹೊಳೆಯ ಅಂತರಸಂತೆ ವಲಯದ ಅರಣ್ಯ ಇಲಾಖೆಯ ಸಿಬ್ಬಂದಿಯ ಗಮನಕ್ಕೆ ತಂದಿದ್ದರು. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ, ಹುಲಿ ಇರುವುದನ್ನು ಖಚಿತಪಡಿಸಿಕೊಂಡು ಬಾಳೆ ತೋಟವನ್ನು ಸುತ್ತುವರಿದು ಮೇಲಾಧಿಕಾರಿಗಳಿಗೆ ವಿಷಯ ತಲುಪಿಸಿದ್ದರು.

ಹುಲಿ ಸೆರೆಗೆ ಕಾರ್ಯಾಚರಣೆ (Etv Bharat)

ನಂತರ ಮೇಲಾಧಿಕಾರಿಗಳ ಮಾರ್ಗದರ್ಶನದ ಮೇರೆಗೆ ಸಾಕಾನೆಗಳಾದ ಅಭಿಮನ್ಯು ಮತ್ತು ಭೀಮನ ನೆರವಿನೊಂದಿಗೆ ಕೂಂಬಿಂಗ್ ಕಾರ್ಯಾಚರಣೆ ನಡೆಸಿ ಅರಿವಳಿಕೆ ಚುಚ್ಚುಮದ್ದು ನೀಡಿ ಹುಲಿಯನ್ನು ಸೆರೆಹಿಡಿಯಲಾಗಿದೆ. ಈ ಹುಲಿ ಸಫಾರಿ ವಲಯದಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿತ್ತು ಎಂದು ಅರಣ್ಯ ಇಲಾಖೆಯ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಹುಲಿ ಸೆರೆಗೆ ಕಾರ್ಯಾಚರಣೆ (Etv Bharat)

ಇದನ್ನೂ ಓದಿ:ವಿಡಿಯೋ: ಆನೆ ಆರ್ಭಟಕ್ಕೆ ಹೆದರಿ ಕೆರೆಯಿಂದ ಪೇರಿ ಕಿತ್ತ ಹುಲಿರಾಯ! - Tiger Escapes

ನಡುರಸ್ತೆಯಲ್ಲಿ ಹುಲಿ ದಾಳಿಗೆ ಆನೆಮರಿ ಬಲಿ: ಹೆದ್ದಾರಿಯಲ್ಲಿ ತಾಯಿ ಆನೆ ರೋದನೆ - Baby Elephant Died

ABOUT THE AUTHOR

...view details