ಬೆಂಗಳೂರು:75ನೇ ಗಣರಾಜ್ಯೋತ್ಸವಕ್ಕೆ ಎಂ.ಜಿ.ರಸ್ತೆಯ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳಿಗ್ಗೆ 9 ಗಂಟೆಗೆ ರಾಜ್ಯಪಾಲರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಲಿದ್ದಾರೆ.
ಪಥ ಸಂಚಲನದಲ್ಲಿ 1,150 ಮಂದಿ ಭಾಗಿಯಾಗಲಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್, ಕೇರಳ ಪೊಲೀಸ್, ಸ್ಕೌಟ್ಸ್-ಗೈಡ್ಸ್, ಎನ್.ಸಿ.ಸಿ, ಸೇವಾದಳ ಹಾಗೂ ವಿವಿಧ ಶಾಲೆಗಳ ಮಕ್ಕಳನ್ನೊಳಗೊಂಡಂತೆ ಕವಾಯತು ಮತ್ತು ಬ್ಯಾಂಡ್‌ನ 38 ತುಕಡಿಗಳು ಪಥಸಂಚಲನದಲ್ಲಿ ಭಾಗಿಯಾಗಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ 1,500 ಶಾಲಾ ಮಕ್ಕಳು ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮ ಮುಗಿಯುವವರೆಗೂ ಮೈದಾನದಲ್ಲಿ ಭಾರಿ ಪೊಲೀಸ್ ಭದ್ರತೆ ವಹಿಸಲಾಗಿದೆ. ನಗರದ 9 ಡಿಸಿಪಿ, 16 ಎಸಿಪಿ, 46 ಇನ್ಸ್‌ಪೆಕ್ಟರ್, 109 ಪಿಎಸ್ಐ, 77 ಎಎಸ್ಐ ಸೇರಿದಂತೆ 1 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.
ಸಂಚಾರ ನಿರ್ವಹಣೆಗಾಗಿ 4 ಡಿಸಿಪಿ, 6 ಎಸಿಪಿ, 21 ಇನ್ಸ್‌ಪೆಕ್ಟರ್ ಸೇರಿದಂತೆ 575 ಜನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. 10 ಕೆಎಸ್ಆರ್‌ಪಿ/ಸಿಎಆರ್ ತುಕಡಿ, 2 ಅಗ್ನಿಶಾಮಕ ವಾಹನ, 2 ಆಂಬ್ಯುಲೆನ್ಸ್ , ಕ್ಷಿಪ್ರ ಕಾರ್ಯಾಚರಣೆ ಪಡೆ, ಡಿ-ಸ್ವಾಟ್ ತುಕಡಿಗಳನ್ನು ನಿಯೋಜಿಸಲಾಗಿದೆ.
ಇದನ್ನೂ ಓದಿ:ಹನಿಮೂನ್‌ಗೆ ಹೋಗದೆ ಸಮುದ್ರ ತೀರ ಸ್ವಚ್ಛತೆ: ಉಡುಪಿ ದಂಪತಿಗೆ ದೆಹಲಿ ಗಣರಾಜ್ಯೋತ್ಸವಕ್ಕೆ ಆಹ್ವಾನ