ಬೆಂಗಳೂರು:ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಿನ್ನೆ ಮೊದಲ ಹಂತದ ಮತದಾನ ನಡೆದಿದ್ದು, ಇಂದು ಮತಯಂತ್ರಗಳು ಸ್ಟ್ರಾಂಗ್ ರೂಂ ನಲ್ಲಿ ಭದ್ರವಾಗಿವೆ. ಇನ್ನು ಸ್ಟ್ರಾಂಗ್ ರೂಂ ಬಳಿ ಡಿಸಿಪಿ ನೇತೃತ್ವದಲ್ಲಿ ಪೊಲೀಸ್ ಮತ್ತು ಕೇಂದ್ರ ಮೀಸಲು ಪಡೆ ನಿಯೋಜಿಸಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಬೆಂಗಳೂರು: ಸ್ಟ್ರಾಂಗ್ ರೂಂ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ - STRONG ROOM - STRONG ROOM
ಬೆಂಗಳೂರಿನಲ್ಲಿ ಮತಯಂತ್ರಗಳನ್ನು ಇರಿಸಿರುವ ಸ್ಟಾಂಗ್ ರೂಮ್ ಬಳಿ ಹದ್ದಿನ ಕಣ್ಣಿಡಲಾಗಿದ್ದು, ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿದೆ.
Published : Apr 27, 2024, 8:38 PM IST
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸ್ಟ್ರಾಂಗ್ ರೂಂ ಅನ್ನು ಅರಮನೆ ರಸ್ತೆಯ ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ ಸ್ಥಾಪಿಸಲಾಗಿದೆ. ಇಲ್ಲಿಯೇ ಮತ ಎಣಿಕೆ ನಡೆಯಲಿದೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸ್ಟ್ರಾಂಗ್ ರೂಂ ಅನ್ನು ವಿಟ್ಠಲ್ ಮಲ್ಯ ರಸ್ತೆಯ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಸ್ಥಾಪಿಸಲಾಗಿದೆ. ಬೆಂಗಳೂರು ದಕ್ಷಿಣ ಲೋಕಾಸಭಾ ಕ್ಷೇತ್ರದ ಸ್ಟ್ರಾಂಗ್ ರೂಂ ಅನ್ನು ಜಯನಗರದ ಎಸ್‌ಎಸ್‌ಎಂಆರ್‌ವಿ ಕಾಲೇಜಿನಲ್ಲಿ ಸ್ಥಾಪಿಸಲಾಗಿದ್ದು, ಮತ ಎಣಿಕೆಯೂ ಇಲ್ಲಿಯೇ ನಡೆಯಲಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳ ಮತಯಂತ್ರಗಳನ್ನು ರಾಮನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಸ್ಟ್ರಾಂಗ್ ರೂಂನಲ್ಲಿ ಇಡಲಾಗಿದೆ.
ಇದನ್ನೂ ಓದಿ:ಚಾಮರಾಜನಗರ: ಮತದಾನ ಬಹಿಷ್ಕರಿಸಿದ್ದ ಗ್ರಾಮದಲ್ಲಿ ಏ.29 ರಂದು ಮರು ಮತದಾನ - re polling