ಕರ್ನಾಟಕ

karnataka

ETV Bharat / state

ಯಡಿಯೂರಪ್ಪನವರ ಜನ್ಮದಿನ ಸರಳವಾಗಿ ಆಚರಣೆ : ಬಿ.ವೈ. ವಿಜಯೇಂದ್ರ - YEDIYURAPPA BIRTHDAY

ಇಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಜನ್ಮದಿನ. ಮಾಜಿ ಮುಖ್ಯಮಂತ್ರಿಗಳಿಗೆ ಗಣ್ಯರು ಮತ್ತು ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರ ಹರಿದುಬರುತ್ತಿದೆ.

ಯಡಿಯೂರಪ್ಪ ಜನ್ಮ ದಿನಾಚರಣೆ, Yediyurappa birth day, bengaluru, ಬಿಎಸ್​ವೈ ಜನ್ಮ ದಿನಾಚರಣೆ
ಡಾಲರ್ಸ್ ಕಾಲೋನಿಯ ನಿವಾಸದ ಬಳಿ ಯಡಿಯೂರಪ್ಪ ಜನ್ಮ ದಿನಾಚರಣೆ (ETV Bharat)

By ETV Bharat Karnataka Team

Published : Feb 27, 2025, 2:03 PM IST

ಬೆಂಗಳೂರು :ಮಾಜಿ ಮುಖ್ಯಮಂತ್ರಿಯಡಿಯೂರಪ್ಪರ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಬಹಳ ಸಂಭ್ರಮದಿಂದ ಅವರ ಜನ್ಮದಿನವನ್ನು ರಾಜ್ಯದೆಲ್ಲೆಡೆ ಆಚರಣೆ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ. ವೈ. ವಿಜಯೇಂದ್ರ ತಿಳಿಸಿದ್ದಾರೆ.

ಡಾಲರ್ಸ್ ಕಾಲೋನಿಯ ಯಡಿಯೂರಪ್ಪ ನಿವಾಸದ ಬಳಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹೋರಾಟಗಾರ, ಮಾಜಿ ಸಿಎಂ ಮತ್ತು ನನ್ನ ಪೂಜ್ಯ ತಂದೆಯವರಾದ ಬಿ.ಎಸ್. ಯಡಿಯೂರಪ್ಪ ಅವರ ಜನ್ಮದಿನ. ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಕಾರ್ಯಕರ್ತರು ಆಸ್ಪತ್ರೆಗಳಿಗೆ ಭೇಟಿ ನೀಡಿ ಹಣ್ಣು ಹಂಚುವ ಕಾರ್ಯ ನೆರವೇರಿಸುತ್ತಿದ್ದಾರೆ. ದೇವಸ್ಥಾನಗಳಲ್ಲಿ ಪೂಜೆ ನೆರವೇರಿಸುತ್ತಿದ್ದಾರೆ ಎಂದರು.

ಡಾಲರ್ಸ್ ಕಾಲೋನಿಯ ನಿವಾಸದ ಬಳಿ ಯಡಿಯೂರಪ್ಪ ಜನ್ಮ ದಿನಾಚರಣೆ (ETV Bharat)

ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಭಾಗ್ಯಲಕ್ಷ್ಮೀ ಯೋಜನೆ, ಬೈಸಿಕಲ್ ಯೋಜನೆಗಳನ್ನು ಜಾರಿಗೊಳಿಸಿದ್ದರು. ಆ ಫಲಾನುಭವಿಗಳನ್ನು ನಮ್ಮ ಕಾರ್ಯಕರ್ತರು ಭೇಟಿ ಮಾಡುತ್ತಿದ್ದಾರೆ. ಯಡಿಯೂರಪ್ಪನವರ ಜನ್ಮದಿನವನ್ನು ಸರಳವಾಗಿ ಮತ್ತು ಅಭಿಮಾನದಿಂದ ಕಾರ್ಯಕರ್ತರು ರಾಜ್ಯಾದ್ಯಂತ ಆಚರಿಸುತ್ತಿದ್ದಾರೆ ಎಂದು ವಿವರಿಸಿದರು.

ಡಾಲರ್ಸ್ ಕಾಲೋನಿಯ ನಿವಾಸದ ಬಳಿ ಯಡಿಯೂರಪ್ಪ ಜನ್ಮ ದಿನಾಚರಣೆ (ETV Bharat)

ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ನಡೆಯ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಐತಿಹಾಸಿಕ ಕುಂಭಮೇಳ ಯಾವುದೇ ಪಕ್ಷಕ್ಕೆ ಸೀಮಿತವಾಗಿಲ್ಲ. ಜಗತ್ತಿನ ವಿವಿಧ ದೇಶಗಳ ಭಕ್ತರು ಕುಂಭಮೇಳದಲ್ಲಿ ಭಾಗವಹಿಸಿದ್ದಾರೆ. ಸುಮಾರು 65 ಕೋಟಿಗೂ ಹೆಚ್ಚು ಭಕ್ತರು, ಹಿಂದೂಗಳು ಬಂದು ಹೋಗಿದ್ದಾರೆ ಎಂದು ತಿಳಿಸಿದರು.

ಡಾಲರ್ಸ್ ಕಾಲೋನಿಯ ನಿವಾಸದ ಬಳಿ ಯಡಿಯೂರಪ್ಪ ಜನ್ಮ ದಿನಾಚರಣೆ (ETV Bharat)

ಪ್ರಯಾಗ್‍ರಾಜ್‍ನಲ್ಲಿ ಪ್ರಸಿದ್ಧ ಕುಂಭಮೇಳ ಮುಕ್ತಾಯವಾಗಿದ್ದು, ಅದು ಯಾವುದೇ ರಾಜಕೀಯ ಪಕ್ಷಕ್ಕೆ ಸೀಮಿತವಾದ ಕಾರ್ಯಕ್ರಮವಲ್ಲ. ಹಿಂದುತ್ವ, ಪ್ರಾಚೀನ ಪರಂಪರೆ, ಸಂಸ್ಕೃತಿ ಬಗ್ಗೆ ವಿಶ್ವಾಸ ಇಟ್ಟುಕೊಂಡವರು ಕುಂಭಮೇಳದಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದಲ್ಲಿ ದಿನೇದಿನೇ ಒಳ ಜಗಳ ಜಾಸ್ತಿ ಆಗುತ್ತಿದೆ. ಮುಂದಿನ ದಿನಗಳಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ಆಗಲಿದೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ ಎಂದರು.

ಡಾಲರ್ಸ್ ಕಾಲೋನಿಯ ನಿವಾಸದ ಬಳಿ ಯಡಿಯೂರಪ್ಪ ಜನ್ಮ ದಿನಾಚರಣೆ (ETV Bharat)

ನಾಳೆ ಸಿಎಂ ಭೇಟಿ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಮೊನ್ನೆ ಬೆಂಗಳೂರು ನಗರದ ನಮ್ಮ ಶಾಸಕರು, ಸಂಸದರು ಚರ್ಚೆ ಮಾಡಿದ್ದೇವೆ. ಹಿಂದೆ ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿದ್ದಾಗ ಬೆಂಗಳೂರು ಅಭಿವೃದ್ಧಿಗೆ ಕಾರ್ಯಕ್ರಮಗಳನ್ನು ನೀಡಿದ್ದರು. ಆ ಎಲ್ಲ ಕಾರ್ಯಕ್ರಮಗಳಿಗೆ ತಡೆ ಆಗುತ್ತಿದೆ. ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಕೊಡಿ ಎಂಬ ಕೂಗು ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಎಲ್ಲ ಶಾಸಕರದ್ದಾಗಿದೆ. ಗ್ರೇಟರ್ ಬೆಂಗಳೂರು ಯೋಜನೆ ಕೈಬಿಟ್ಟು ಬಿಬಿಎಂಪಿ ಚುನಾವಣೆ ನಡೆಸಬೇಕೆಂಬ ಆಗ್ರಹ ಎಲ್ಲರದ್ದಾಗಿದೆ. ಬೆಂಗಳೂರು ಒಳಗೊಂಡು ಅಭಿವೃದ್ಧಿ ಕಾರ್ಯ ಎಲ್ಲ ಕಡೆ ನಡೆಯಬೇಕೆಂಬ ನಿಟ್ಟಿನಲ್ಲಿ ನಮ್ಮ ಶಾಸಕರ ಜೊತೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ನೀಡಲಿದ್ದೇವೆ ಎಂದು ತಿಳಿಸಿದರು.

ಬಿಎಸ್​​ವೈಗೆ ಶುಭಾಶಯ ಕೋರಿದ ಗಣ್ಯರು : ಪ್ರತಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ಗಣ್ಯರು ಯಡಿಯೂರಪ್ಪ ಅವರಿಗೆ ಶುಭಾಶಯ ಕೋರಿದರು.

ಇದನ್ನೂ ಓದಿ: ಏಕತೆಯ 'ಮಹಾಯಜ್ಞ' ಮುಕ್ತಾಯಗೊಂಡಿದೆ: ಐತಿಹಾಸಿಕ ಬೃಹತ್ ಮಹಾಕುಂಭಮೇಳದ ಬಗ್ಗೆ ಪ್ರಧಾನಿ ಮೋದಿ ಬಣ್ಣನೆ

ಇದನ್ನೂ ಓದಿ: ಯಾರೋ ಒಂದಿಬ್ಬರು ಹಗುರವಾಗಿ ಮಾತಾಡುತ್ತಿರಬಹುದು, ತಲೆಕೆಡಿಸಿಕೊಳ್ಳುವುದು ಬೇಡ : ಬಿಎಸ್​ವೈ

ABOUT THE AUTHOR

...view details