ಕರ್ನಾಟಕ

karnataka

ETV Bharat / state

ಘಟಪ್ರಭಾ ನದಿಗೆ ಬಿದ್ದ ಟ್ರ್ಯಾಕ್ಟರ್: ಓರ್ವ ನಾಪತ್ತೆ, 12 ಮಂದಿ ಪಾರು - Tractor Fell Into River - TRACTOR FELL INTO RIVER

13 ಜನರಿದ್ದ ಟ್ರ್ಯಾಕ್ಟರ್ ಘಟಪ್ರಭಾ ನದಿಗೆ ಬಿದ್ದಿದ್ದು, 12 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Tractor Fell into River
ಘಟಪ್ರಭಾ ನದಿಗೆ ಬಿದ್ದ ಟ್ರ್ಯಾಕ್ಟರ್ (ETV Bharat)

By ETV Bharat Karnataka Team

Published : Jun 9, 2024, 1:05 PM IST

ಘಟಪ್ರಭಾ ನದಿಗೆ ಬಿದ್ದ ಟ್ರ್ಯಾಕ್ಟರ್ (ETV Bharat)

ಬೆಳಗಾವಿ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಘಟಪ್ರಭಾ ನದಿಗೆ ಟ್ರ್ಯಾಕ್ಟರ್ ಮುಗುಚಿ ಬಿದ್ದಿದೆ. ಘಟನೆಯಲ್ಲಿ ಓರ್ವ ನಾಪತ್ತೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ.

ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಧಾರಾಕಾರ ಮಳೆ ಆಗುತ್ತಿದೆ. ಮೂಡಲಗಿ ತಾಲೂಕಿನ ಅವರಾದಿ ಗ್ರಾಮದ ನಂದಗಾಂವ್ ಸಮೀಪದ ಬ್ರಿಡ್ಜ್ ಕಮ್ ಬ್ಯಾರೇಜ್ ಜಲಾವೃತವಾಗಿದೆ. ಈ ಬ್ರಿಡ್ಜ್ ದಾಟುವಾಗ ಟ್ರಾಲಿ ಸಮೇತ ಟ್ರಾಕ್ಟರ್ ನದಿಗೆ ಬಿದ್ದಿದೆ.

ಟ್ರ್ಯಾಕ್ಟರ್​ನಲ್ಲಿ ಪ್ರಯಾಣಿಸುತ್ತಿದ್ದ 13 ಜನರ ಪೈಕಿ ಹನ್ನೆರಡು ಮಂದಿ ಈಜಿ ಸಾವಿನ ದವಡೆಯಿಂದ ಪಾರಾಗಿದ್ದಾರೆ‌. ಆದರೆ, ಓರ್ವ ವ್ಯಕ್ತಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಟ್ರ್ಯಾಕ್ಟರ್​ನಲ್ಲಿ ಪ್ರಯಾಣಿಸುತ್ತಿದ್ದವರು ಅವರಾದಿಯಿಂದ ನಂದಗಾಂವ ಗ್ರಾಮಕ್ಕೆ ಕೂಲಿ ಕೆಲಸಕ್ಕೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಉತ್ತರ ಕನ್ನಡದಲ್ಲಿ ಅಕ್ರಮ ಜಲಸಾಹಸಿ ಚಟುವಟಿಕೆ: ಪ್ರವಾಸೋದ್ಯಮ ಅಧಿಕಾರಿಗಳಿಂದ ಕ್ರಮದ ಎಚ್ಚರಿಕೆ - Illegal Water Sports Activity

ABOUT THE AUTHOR

...view details