ಬೆಂಗಳೂರು: ಸುರಕ್ಷತೆಯ ದೃಷ್ಟಿಯಿಂದ ಪಾನಮತ್ತರಾಗಿ ವಾಹನ ಚಲಾಯಿಸುವಂತಿಲ್ಲ ಎಂಬ ಸಂಚಾರಿ ನಿಯಮವಿದೆ. ಅದರ ನಡುವೆಯೂ ಮದ್ಯಪಾನ ಮಾಡಿ ಶಾಲಾ ಮಕ್ಕಳ ವಾಹನ ಚಲಾಯಿಸುವ ಚಾಲಕರ ವಿರುದ್ಧ ಬೆಂಗಳೂರು ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದಾರೆ.
ಇಂದು ಬೆಳಗ್ಗೆ 7 ರಿಂದ 9.30ರ ವರೆಗೂ ಕಾರ್ಯಾಚರಣೆ ಕೈಗೊಂಡು ಒಟ್ಟು 3,414 ಶಾಲಾ ವಾಹನಗಳ ಚಾಲಕರನ್ನು ಪೊಲೀಸರು ತಪಾಸಣೆಗೊಳಪಡಿಸಿದ್ದಾರೆ. ಈ ವೇಳೆ ಬೆಳ್ಳಂಬೆಳಗ್ಗೆ ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ವೇಳೆ ಪಾನಮತ್ತರಾಗಿದ್ದ 16 ಜನ ಚಾಲಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅವರ ಡ್ರೈವಿಂಗ್ ಲೈಸೆನ್ಸ್ಗಳನ್ನು ವಶಕ್ಕೆ ಪಡೆಯಲಾಗಿದ್ದು, ಅಮಾನತುಗೊಳಿಸಲು ಸಾರಿಗೆ ಇಲಾಖೆ (ಆರ್.ಟಿ.ಓ) ಗೆ ರವಾನಿಸಲಾಗಿದೆ ಎಂದು ಬೆಂಗಳೂರು ಸಂಚಾರಿ ವಿಭಾಗದ ಜಂಟಿ ಆಯುಕ್ತ ಎಂ ಎನ್ ಅನುಚೇತ್ ಮಾಹಿತಿ ನೀಡಿದ್ದಾರೆ.
''ಇಂತಹ ಚಾಲಕರ ವಿರುದ್ಧ ಕೇವಲ ಸಾರಿಗೆ ನಿಯಮ ಉಲ್ಲಂಘನೆ ಪ್ರಕರಣ ಅಷ್ಟೇ ಅಲ್ಲದೆ, ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಿದ್ದೇವೆ. ಇದನ್ನು ಗಂಭೀರವಾಗಿ ಪರಿಗಣಿಸಿ, ಅವರನ್ನು ಕೆಲಸಕ್ಕೆ ಸೇರಿಸಿಕೊಂಡ ಶಾಲಾ ಆಡಳಿತ ಮಂಡಳಿಯವರಿಗೂ ನೋಟಿಸ್ ಕಳಿಸಿ, ಅವರಿಂದ ಸ್ಪಷ್ಟನೆ ಪಡೆಯುತ್ತೇವೆ. ಮುಂದಿನ ದಿನಗಳಲ್ಲೂ ಈ ರೀತಿ ಕಾರ್ಯಾಚರಣೆ ಮುಂದುವರಿಸುತ್ತೇವೆ. ಆ ಚಾಲಕರನ್ನು ಯಾವಾಗ ಕೆಲಸಕ್ಕೆ ಸೇರಿಸಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಸರ್ವೋಚ್ಚ ನ್ಯಾಯಾಲಯ ಆದೇಶ ಪಾಲನೆ ಆಗಿದೆಯಾ, ಇಲ್ಲವಾ ಎಂಬುದನ್ನು ಪರಿಶೀಲಿಸುತ್ತೇವೆ. ಈ ಪ್ರಕರಣದಲ್ಲಿ ಎಲ್ಲಾ ಶಾಲೆಗಳು ಖಾಸಗಿ ವಾಹನಗಳನ್ನು ಬಳಸಿರುವುದು ತಿಳಿದುಬಂದಿದೆ. ಸಾರಿಗೆ ಇಲಾಖೆಯ ಅಧಿಕಾರಿಗಳ ಸಹಯೋಗದಲ್ಲಿ ಈ ಕಾರ್ಯಾಚರಣೆ ನಡೆಸಿದ್ದೇನೆ. ನಿಯಮ ಉಲ್ಲಂಘನೆ ಬಗ್ಗೆ ಆ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ'' ಎಂದು ಅನುಚೇತ್ ತಿಳಿಸಿದರು.
ಇದನ್ನೂ ಓದಿ:ಪೊಲೀಸ್ ಇಲಾಖೆಯಲ್ಲಿ AI, ML ತಂತ್ರಜ್ಞಾನ ಆಧರಿತ ನೂತನ