ಬೆಂಗಳೂರು:ಅನಾರೋಗ್ಯದ ಹಿನ್ನೆಲೆಯಲ್ಲಿ ಇತ್ತೀಚೆಗೆ ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿರುವಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಸ್.ಎಂ. ಕೃಷ್ಣ ಅವರಿಗೆ ಐಸಿಯುನಲ್ಲೇ ಚಿಕಿತ್ಸೆ ಮುಂದುವರಿಸಲಾಗಿದೆ. ವಯೋಸಹಜ ಆನಾರೋಗ್ಯದಿಂದ ದಾಖಲಾಗಿರುವ ಅವರು ಕಳೆದ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.
ಉಸಿರಾಟದ ಸೋಂಕಿನಿಂದ ಬಳಲುತ್ತಿರುವ ಅವರನ್ನು ಏಪ್ರಿಲ್ 21 ರಂದು ಮೊದಲು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಏಪ್ರಿಲ್ 29 ರಂದು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ತಜ್ಞ ವೈದ್ಯರಾದ ಡಾ. ಸತ್ಯನಾರಾಯಣ ಹಾಗೂ ಡಾ. ಸುನೀಲ್ ಕಾರಂತ್ ಅವರ ನೇತೃತ್ವದ ಕ್ರಿಟಿಕಲ್ ಕೇರ್ ತಂಡವು ಎಸ್.ಎಂ. ಕೃಷ್ಣ ಅವರಿಗೆ ಚಿಕಿತ್ಸೆ ನೀಡುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.