ಕರ್ನಾಟಕ

karnataka

ETV Bharat / state

ಶಿವಮೊಗ್ಗ: ತುಂಗಾ ರಿವರ್ ಫ್ರಂಟ್ ಪ್ರಾಜೆಕ್ಟ್ ಲೋಕಾರ್ಪಣೆ

ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ನಿರ್ಮಿಸಲಾಗಿರುವ ತುಂಗಾ ರಿವರ್ ಫ್ರಂಟ್ ಪ್ರಾಜೆಕ್ಟ್ ಹಾಗೂ ಸಾರ್ವಜನಿಕ ಬೈಸಿಕಲ್ ಯೋಜನೆಯನ್ನು ಸೋಮವಾರ ಸಾರ್ವಜನಿಕರಿಗೆ ಮುಕ್ತಗೊಳಿಸಲಾಯಿತು.

ತುಂಗಾ ರಿವರ್ ಫ್ರಂಟ್ ಪ್ರಾಜೆಕ್ಟ್ ಲೋಕಾರ್ಪಣೆ
ತುಂಗಾ ರಿವರ್ ಫ್ರಂಟ್ ಪ್ರಾಜೆಕ್ಟ್ ಲೋಕಾರ್ಪಣೆ

By ETV Bharat Karnataka Team

Published : Jan 29, 2024, 9:45 PM IST

ಶಿವಮೊಗ್ಗ:ತುಂಗಾ ನದಿ ಉತ್ತರದಂಡೆ ಪಾದಚಾರಿ ಸೇತುವೆ, ವಾಯುವಿಹಾರ, ಸಾರ್ವಜನಿಕ ಬೈಸಿಕಲ್ ಯೋಜನೆ ಮುಂತಾದವುಗಳನ್ನು ಸಾರ್ವಜನಿಕರು ಜವಾಬ್ದಾರಿಯಿಂದ ಬಳಸಿಕೊಳ್ಳಬೇಕು. ಹೀಗೆ ಬಳಸಿಕೊಂಡಾಗ ಮಾತ್ರ ಸಾರ್ಥಕವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಎಲೆಕ್ಟ್ರಿಕಲ್ ಸೈಕಲ್ ಓಡಿಸಿದ ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ನಿರ್ಮಿಸಲಾಗಿರುವ ತುಂಗಾ ರಿವರ್ ಫ್ರಂಟ್ ಪ್ರಾಜೆಕ್ಟ್ ಹಾಗೂ ಸಾರ್ವಜನಿಕ ಬೈಸಿಕಲ್ ಯೋಜನೆಯನ್ನು ಸೋಮವಾರ ಸಾರ್ವಜನಿಕರಿಗೆ ಮುಕ್ತಗೊಳಿಸಿ ಮಾತನಾಡಿದ ಅವರು, ಜನರು ಕಟ್ಟುವ ಕಂದಾಯದ ಹಣದಿಂದಲೇ ನಿರ್ಮಾಣವಾಗಿರುವ ಸ್ಮಾರ್ಟ್ ಸಿಟಿ ಯೋಜನೆಗಳ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ಯೋಜನೆಯ ಉಪಯೋಗವನ್ನು ಎಲ್ಲರೂ ಪಡೆಯಬೇಕು. ಸಾರ್ವಜನಿಕರು ತುಂಗಾ ನದಿ ಉದ್ಯಾನದಲ್ಲಿ ಓಡಾಡಬೇಕು. ಆಗ ಮಾತ್ರ ಉದ್ಯಾನ ನಿರ್ಮಾಣ ಸಾರ್ಥಕವಾಗುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಶೇ.50.50 ಅನುದಾನದಲ್ಲಿ ಕೆಲಸಗಳು ನಡೆದಿದ್ದು, ತುಂಗಾ ರಿವರ್ ಫ್ರಂಟ್ ಪ್ರಾಜೆಕ್ಟ್​​ ಅನ್ನು ರೂ.103 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಸಾರ್ವಜನಿಕರು ಈ ಯೋಜನೆಗಳನ್ನು ತಮ್ಮ ಆಸ್ತಿ ಎಂದು ಅರಿತು ಸ್ವಚ್ಛತೆ ಹಾಗೂ ಕಾಳಜಿಯಿಂದ ನೋಡಿಕೊಳ್ಳಬೇಕು. ಉದ್ಯಾನದಲ್ಲಿ ಮಹಿಳೆಯರು, ಮಕ್ಕಳಿಗೆ ಯಾವುದೇ ತೊಂದರೆ ಆಗದಂತೆ ರಕ್ಷಣಾ ವ್ಯವಸ್ಥೆ, ಸಿಸಿಟಿವಿ ಅವಳವಡಿಸುವುದು. ರಾತ್ರಿ ವೇಳೆ ವಿದ್ಯುತ್ ದೀಪ ಸೇರಿದಂತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳು ನೊಡಿಕೊಳ್ಳಬೇಕು ಎಂದರು.

ಯೋಜನೆಗೆ ಚಾಲನೆ ನೀಡುತ್ತಿರುವುದು

ಉದ್ಯಾನ ನಿರ್ವಹಣೆಗಾಗಿ ಸಾರ್ವಜನಿಕರಿಗೆ ಹೊರೆಯಾಗದಂತೆ ಪ್ರವೇಶ ಶುಲ್ಕ ತೆಗೆದುಕೊಳ್ಳುವ ಬಗ್ಗೆ ಸ್ಮಾರ್ಟ್ ಸಿಟಿ ಎಂಡಿ ನಿರ್ಧರಿಸಲಿದ್ದಾರೆ. ಇಲ್ಲಿ ಹಸಿರು, ಸ್ವಚ್ಛತೆ, ಭದ್ರತೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಅಂಗಡಿ, ಜಾಹೀರಾತು, ಮಳಿಗೆಗಳಿಗೆ ಅವಕಾಶ ನೀಡಿ ಪ್ರವಾಸೋದ್ಯಮವನ್ನು ಉತ್ತೇಜಿಸಬೇಕು ಎಂದ ಸಚಿವರು, ಶಿವಪ್ಪನಾಯಕ ವೃತ್ತದಲ್ಲಿ ಪಾಲಿಕೆಗೆ ಹೊಂದಿಕೊಂಡಂತೆ ಹೂವು - ಹಣ್ಣು ಮಾರುಕಟ್ಟೆಗಾಗಿ 118 ಮಳಿಗೆ, ಮಲ್ಟಿಲೆವೆಲ್​ ಕಾರ್​ ಪಾರ್ಕಿಂಗ್​ಗೆ ಒಟ್ಟು 172 ಕಾರು ಮತ್ತು 78 ಬೈಕ್ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ ಎಂದರು.

ಯೋಜನೆಗೆ ಚಾಲನೆ ನೀಡುತ್ತಿರುವುದು

ಶಾಸಕ ಎಸ್ ಎನ್ ಚನ್ನಬಸಪ್ಪ ಮಾತನಾಡಿ, ಸ್ಮಾರ್ಟ್ ಸಿಟಿ ಕಾಮಗಾರಿಗಳು ಉತ್ತಮವಾಗಿ ಆಗಿದ್ದು, ಇಂದು ಸಾರ್ವಜನಿಕರಿಗೆ ಮುಕ್ತಗೊಳಿಸುವ ಕಾರ್ಯ ನಡೆದಿದೆ. ಈ ಸ್ಮಾರ್ಟ್ ಸಿಟಿ ಯೋಜನೆ ಮಂಜೂರಾತಿ ಮತ್ತು ಅನುಷ್ಠಾನದಲ್ಲಿ ಅನೇಕ ನಾಯಕರ ಪ್ರಯತ್ನ ಮತ್ತು ಶ್ರಮವಿದೆ. ನಗರದ 6 ವಾರ್ಡ್‍ಗಳಲ್ಲಿ ಪೂರ್ಣ ಪ್ರಮಾಣ ಮತ್ತು 9 ವಾರ್ಡ್​​ಗಳಲ್ಲಿ ಭಾಗಶಃ ಸ್ಮಾರ್ಟ್ ಸಿಟಿ ಕೆಲಸಗಳು ಆಗಿವೆ. ಮುಂದಿನ ಹಂತದಲ್ಲಿ ಇತರ ವಾರ್ಡ್​​ಗಳನ್ನು ಪರಿಗಣಿಸಲಾಗುವುದು ಎಂದರು.

ಎಲೆಕ್ಟ್ರಿಕಲ್ ಸೈಕಲ್ ಓಡಿಸಿದ ಸಚಿವ ಮಧು ಬಂಗಾರಪ್ಪ ಮತ್ತು ಶಾಸಕ ಎಸ್ ಎನ್ ಚನ್ನಬಸಪ್ಪ

ಎಲೆಕ್ಟ್ರಿಕಲ್ ಸೈಕಲ್ ಓಡಿಸಿದ ಸಚಿವರು:ನಗರದ ಕೋಟೆ ರಸ್ತೆಯ ಪಕ್ಕದಲ್ಲಿನ ರಿವರ್ ಪಾಥ್ ಉದ್ಘಾಟಿಸಿದ ಸಚಿವ ಮಧು ಬಂಗಾರಪ್ಪ, ನಂತರ ಇಲ್ಲಿ ಸಾರ್ವಜನಿಕರಿಗೆ ಓಡಿಸಲು ಇಟ್ಟಿರುವ ಎಲೆಕ್ಟ್ರಿಕಲ್ ಚಾರ್ಜ್ ಸೈಕಲ್ ಅನ್ನು ಓಡಿಸುವ ಮೂಲಕ ಗಮನ ಸೆಳೆದರು.

ಇದನ್ನೂ ಓದಿ:5555 ಕೆಜಿ ನಾಣ್ಯಗಳಿಂದ ಆನೆ, ಅಂಬಾರಿಯೊಂದಿಗೆ ತುಲಾಭಾರ: ಬೃಹತ್ ತುಲಾಭಾರಕ್ಕೆ ಹುಬ್ಬಳ್ಳಿ ಸಜ್ಜು

ABOUT THE AUTHOR

...view details