ಬೆಂಗಳೂರು:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ತೆರಿಗೆ ಕಟ್ಟುವ ವಿಚಾರದಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. ಬಿಬಿಎಂಪಿ ವತಿಯಿಂದ ನಡೆದ 75ನೇ ಗಣರಾಜ್ಯೋತ್ಸವ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಮಾಧ್ಯಮಗಳ ಜೊತೆ ಮಾತನಾಡಿದರು.
ತೆರಿಗೆ ವಿಚಾರದಲ್ಲಿ ಎರಡು ರೀತಿಯ ನಿರ್ದೇಶನವನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿದ್ದಾರೆ. ಮೊದಲನೆಯದು ಪೆನಾಲ್ಟಿ ಹಾಕುವ ವಿಚಾರ, ಎರಡನೇಯದು ಬಡ್ಡಿ ಹಾಕುವುದು. ಈ ಹಿನ್ನೆಲೆಯಲ್ಲಿ ಕಾನೂನಿಗೆ ಸೂಕ್ತ ತಿದ್ದುಪಡಿ ಕೈಗೊಳ್ಳಲು ಬಿಬಿಎಂಪಿ ಅಧಿಕಾರಿಗಳು ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ ಎಂದು ತಿಳಿಸಿದರು.