ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ) : ಬ್ಯಾಂಕ್ನಲ್ಲಿ ಹಣ ಡ್ರಾ ಮಾಡುವ ಗ್ರಾಹಕರನ್ನು ಹಿಂಬಾಲಿಸಿಕೊಂಡು ಬಂದು ಹಣ ದೋಚುತ್ತಿದ್ದ ಕುಖ್ಯಾತ ಓಜಿ ಕುಪ್ಪಂ ಗ್ಯಾಂಗ್ನ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ದೇವನಹಳ್ಳಿಯ ವಿಜಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
ಆಂಧ್ರಪ್ರದೇಶದ ಕೆ. ಹರಿಕೃಷ್ಣ ಮತ್ತು ತಮಿಳುನಾಡಿನ ಕೆ. ಸುಧಾಕರ್ ಬಂಧಿತ ಆರೋಪಿಗಳು. ಬಂಧಿತರಿಬ್ಬರು ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಜ. 4ರಂದು ಗ್ರಾಹಕರೊಬ್ಬರ ಹಣ ದೋಚಿ ಪರಾರಿಯಾಗಿದ್ದರು. ಘಟನೆಗೆ ಸಂಬಂಧಿಸಿದಂತೆ ವಿಜಯಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.