ಕರ್ನಾಟಕ

karnataka

ETV Bharat / state

ಅಡಿಕೆ ಗಿಡಗಳನ್ನು ಕಡಿದು ಹಾಕಿದ್ದಕ್ಕೆ ಮಹಿಳೆಯ ಕೊಲೆ; ಮೃತದೇಹ ಭದ್ರಾ ನಾಲೆಗೆ ಎಸೆದಿದ್ದ ಇಬ್ಬರ ಬಂಧನ - Woman Murder

ಅಡಿಕೆ ಗಿಡಗಳನ್ನು ಕಡಿದು ಹಾಕಿದ್ದಕ್ಕೆ ಮಹಿಳೆಯ ಕೊಲೆ ಮಾಡಿ ಮೃತದೇಹವನ್ನು ಭದ್ರಾ ನಾಲೆಗೆ ಎಸೆದಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

TWO ARRESTED  NUT TREES  DAVANAGERE
ಅಡಿಕೆ ಮರಗಳನ್ನು ಕಡಿದು ಹಾಕಿದ್ದಕ್ಕೆ ಮಹಿಳೆಯ ಕೊಲೆ (ಕೃಪೆ: ETV Bharat)

By ETV Bharat Karnataka Team

Published : May 15, 2024, 1:26 PM IST

ದಾವಣಗೆರೆ:ಅಡಿಕೆ ಗಿಡಗಳನ್ನು ಕಡಿದು ಹಾಕಿದ್ದಕ್ಕೆ ಮಹಿಳೆಯನ್ನು ಕೊಲೆ ಮಾಡಿ ಮೃತದೇಹವನ್ನು ಭದ್ರಾ ನಾಲೆಗೆ ಎಸೆದಿದ್ದ ಇಬ್ಬರು ಆರೋಪಿಗಳನ್ನು ಬಸವಪಟ್ಟಣ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೊಲೆಗೀಡಾದ ಮಹಿಳೆಯನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಕೆರೆ ಗ್ರಾಮದ ನೇತ್ರಾವತಿ (47) ಎಂದು ಗುರುತಿಸಲಾಗಿದೆ. ಭದ್ರಾವತಿ ಮೂಲದ ಕುಮಾರ ಹೆಚ್​.ಜಿ (50), ಚಿದಾನಂದಪ್ಪ (54) ಬಂಧಿತ ಆರೋಪಿಗಳು.

ಭದ್ರಾ ನಾಲೆಯಲ್ಲಿ ಮಹಿಳೆ ಶವ ಪತ್ತೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯ ಕಣಿವೆ ಬಿಳಚಿ ಗ್ರಾಮದ ಬಳಿ ಭದ್ರಾ ನಾಲೆಯಲ್ಲಿ ಇದೇ ತಿಂಗಳು 09 ರ ಗುರುವಾರ ಅನಾಮಧೇಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದರ ಬಗ್ಗೆ ಭದ್ರಾ ನಾಲೆಯ ನೀರಗಂಟಿ ಅಣ್ಣಪ್ಪ (53) ಎಂಬವರು ಪೊಲೀಸ್​​ ಠಾಣೆಗೆ ಬಂದು ದೂರು ನೀಡಿದ್ದರು. ಬಸವಾಪಟ್ಟಣ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದರು.

ಮೃತದೇಹದ ಕೊರಳಲ್ಲಿ ಹಗ್ಗ ಸುತ್ತಿದ ರೀತಿಯ ಗುರುತು ಇತ್ತು. ಮಹಿಳೆಯನ್ನು ಕೊಲೆ ಮಾಡಿ ಭದ್ರಾ ಕಾಲುವೆಗೆ ಹಾಕಿರುವ ಬಗ್ಗೆ ಅನುಮಾನ ವ್ಯಕ್ತವಾದ ಕಾರಣ ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ 61/2024 ಕಲಂ 302, 201ರಡಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದರು.

ಹೊಳೆಹೊನ್ನೂರು ಠಾಣೆಯಲ್ಲಿ ನಾಪತ್ತೆ ಪ್ರಕರಣ: ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಮಹಿಳೆ ಕಾಣೆಯಾಗಿರುವ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೂ ದಾವಣಗೆರೆ ಜಿಲ್ಲೆಯ ಬಸವಾಪಟ್ಟಣ ನಾಲೆಯಲ್ಲಿ ದೊರೆತ ಅನಾಮಧೇಯ ಶವದ ಪ್ರಕರಣಕ್ಕೂ ತಾಳೆಯಾಗಿತ್ತು. ಈ ಸಂಬಂಧ ಮೃತ ಮಹಿಳೆಯ ಸಂಬಂಧಿಕರನ್ನು ಸಂಪರ್ಕಿಸಿದಾಗ ಮೃತಳ ಗುರುತು ಪತ್ತೆ ಮಾಡಲಾಗಿತ್ತು.

ತನಿಖೆ ಮುಂದುವರೆಸಿದ ಪೊಲೀಸರು ಮೃತ ಮಹಿಳೆಯ ಕೊಲೆ ಪ್ರಕರಣದಲ್ಲಿ ಕುಮಾರ ಹೆಚ್​.ಜಿ ಮತ್ತು ಚಿದಾನಂದಪ್ಪ ಎಂಬುವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಆಗ ಮೃತ ಮಹಿಳೆ ನೇತ್ರಾವತಿ ತಮ್ಮ ಜಮೀನಿನಲ್ಲಿ ಅಡಿಕೆ ಗಿಡಗಳನ್ನು ಕಡಿದಿದ್ದರಿಂದ ಕೋಪಗೊಂಡ ಆರೋಪಿಗಳಿಬ್ಬರು ಆಕೆಯನ್ನು ತಮ್ಮ ಜಮೀನಿನಲ್ಲಿ ಕೊಲೆ ಮಾಡಿ ನಂತರ ಜಮೀನಿನ ಸಮೀಪದ ಭದ್ರಾ ಚಾನಲ್​​ನಲ್ಲಿ ಎಸೆದು ಹಾಕಿರುವ ಬಗ್ಗೆ ಒಪ್ಪಿಕೊಂಡಿದ್ದರು. ಕೊಲೆ ಪ್ರಕರಣದ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಓದಿ:ಸಾಲ ತೀರಿಸಲು ಮನೆ ಮಾಲಕಿಯ ಕತ್ತು ಹಿಸುಕಿ ಕೊಲೆ; ಬಾಡಿಗೆಗಿದ್ದ ಯುವತಿ ಬಂಧನ - House Owner Murder

ABOUT THE AUTHOR

...view details