ಹಾವೇರಿ:ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ಸಹೋದರರಿಬ್ಬರು ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ರಾಣೆಬೆನ್ನೂರು ತಾಲೂಕಿನ ನದಿಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು 12 ವರ್ಷದ ಬಸವರಾಜ್ ಪವಾರ್ ಮತ್ತು 9 ವರ್ಷದ ನಾಗರಾಜ್ ಪವಾರ್ ಎಂದು ಗುರುತಿಸಲಾಗಿದೆ.
ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸಹೋದರರು ನೀರಿನಲ್ಲಿ ಮುಳುಗಿ ಸಾವು - brothers died in Haveri - BROTHERS DIED IN HAVERI
ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ಸಹೋದರರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸಹೋದರರು ನೀರಿನಲ್ಲಿ ಮುಳುಗಿ ಸಾವು
Published : Mar 25, 2024, 11:58 AM IST
ತುಂಗಭದ್ರಾ ನದಿಯಲ್ಲಿ ಮರಳು ತುಂಬಿದ ಗುಂಡಿಯಲ್ಲಿ ಬಿದ್ದು ಇಬ್ಬರು ಸಹೋದರರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗ್ತಿದೆ. ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ತಮ್ಮ ಮಕ್ಕಳ ಸಾವಿಗೆ ಅಕ್ರಮ ಮರಳುಗಾರಿಕೆ ಕಾರಣ ಎಂದು ಪೋಷಕರು ಆರೋಪಿಸಿದರು. ಕುಮಾರಪಟ್ಟಣಂ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.