ಕರ್ನಾಟಕ

karnataka

ETV Bharat / state

ಬಾಗಲಕೋಟೆ: ಮನೆ ಮೇಲ್ಛಾವಣಿ ಕುಸಿದು ಇಬ್ಬರು ಮಕ್ಕಳು ಸಾವು - Two children died - TWO CHILDREN DIED

ಮೃತಪಟ್ಟ ಮಕ್ಕಳ ಮನೆಗೆ ಭೇಟಿ ನೀಡಿದ ಶಾಸಕ ವಿಜಯಾನಂದ ಕಾಶಪ್ಪನವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

MLA Vijayananda Kashappanavara condoled with the family
ಮನೆಯವರಿಗೆ ಸಾಂತ್ವನ ಹೇಳಿದ ಶಾಸಕ ವಿಜಯಾನಂದ ಕಾಶಪ್ಪನವರ (ETV Bharat)

By ETV Bharat Karnataka Team

Published : Jun 1, 2024, 1:16 PM IST

Updated : Jun 1, 2024, 4:31 PM IST

ಮನೆಯವರಿಗೆ ಸಾಂತ್ವನ ಹೇಳಿದ ಶಾಸಕ ವಿಜಯಾನಂದ ಕಾಶಪ್ಪನವರ (ETV Bharat)

ಬಾಗಲಕೋಟೆ: ಮನೆಯ ಮೇಲ್ಛಾವಣಿ ಕುಸಿದು ಇಬ್ಬರು ಮಕ್ಕಳು ಮೃತಪಟ್ಟಿರುವ ದಾರುಣ ಘಟನೆ ಇಳಕಲ್ ತಾಲೂಕಿನ ಕಂದಗಲ್ಲ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗೀತಾ ಈಶ್ವರಯ್ಯ ಆದಾಪೂರಮಠ (12) ಮತ್ತು ಆಕೆಯ ತಮ್ಮ ರುದ್ರಯ್ಯ ಈಶ್ವರಯ್ಯ ಆದಾಪೂರಮಠ (10) ಇಬ್ಬರೂ ಮನೆಯಲ್ಲಿ ಆಡುತ್ತ ಕುಳಿತಿದ್ದಾಗ ಆಕಸ್ಮಿಕವಾಗಿ ಮನೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ವಿಚಿತ್ರವೆಂದರೆ ಗ್ರಾಮದಲ್ಲಿ ವಿಪರೀತ ಬಿಸಿಲು ಇದ್ದು, ಮಳೆಯು ಸಹ ನಾಲ್ಕೈದು ದಿನಗಳ ಹಿಂದೆಯಷ್ಟೇ ಆಗಿತ್ತು. ಆದರೆ ಇಂದು ಆಕಸ್ಮಿಕವಾಗಿ ಮನೆಯ ಮೇಲ್ಛಾವಣಿ ಕುಸಿದಿರುವುದು ಆಶ್ಚರ್ಯ ಮೂಡಿಸಿದೆ. ಮನೆಯಲ್ಲಿ ಇತರ ಕುಟುಂಬಸ್ಥರು ಯಾರೂ ಇರಲಿಲ್ಲ ಎಂದು ಹೇಳಲಾಗಿದೆ. ಘಟನೆಯ ಮಾಹಿತಿ ತಿಳಿದು ನಂತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇಳಕಲ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್​ಐ ಮಲ್ಲು ಸತ್ತಿಗೌಡರ ತನಿಖೆ ನಡೆಸಿದ್ದಾರೆ. ಇಳಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಶವಪರೀಕ್ಷೆ ನಡೆಸಲಾಗಿದೆ. ಮೃತ ಮಕ್ಕಳ ಕುಟುಂಬಸ್ಥರ ಮನೆಗೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ವಿಜಯಾನಂದ ಕಾಶಪ್ಪನವರ ಮತ್ತು ಅಧಿಕಾರಿಗಳು ಭೇಟಿ ನೀಡಿ ಸಾಂತ್ವನ ಹೇಳಿದರು. ಸರ್ಕಾರದಿಂದ ಸಿಗಬಹುದಾದ ಎಲ್ಲಾ ರೀತಿಯ ಪರಿಹಾರವನ್ನು ಕೊಡಿಸುವ ಭರವಸೆ ನೀಡಿದ್ದಾರೆ.

ಈಶ್ವರಯ್ಯ ಆದಾಪೂರಮಠ ಅವರ ಮನೆಗೆ ತಹಶೀಲ್ದಾರ ಸತೀಶ್ ಕೂಡಲಗಿ, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಮುರಳೀಧರ ದೇಶಪಾಂಡೆ ಮತ್ತಿತರರ ಜೊತೆಗೆ ಭೇಟಿ ನೀಡಿ ಅವರಿಗೆ ಧೈರ್ಯ ತುಂಬಿದರು.

ಇದನ್ನೂ ಓದಿ:ಹಾಸನ: ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ಸಾವು - three children drown in lake

Last Updated : Jun 1, 2024, 4:31 PM IST

ABOUT THE AUTHOR

...view details