ಕರ್ನಾಟಕ

karnataka

ETV Bharat / state

ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಕೆರೆಗೆ ಬಿದ್ದು ಇಬ್ಬರು ಸಾವು; ಓರ್ವ ಬಚಾವ್ - CAR FELL INTO LAKE

ಕಾರು ಕೆರೆಗೆ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಾಮರಾಜನಗರದ ಕುಂತೂರಿನಲ್ಲಿ ನಡೆದಿದೆ.

CAR FALLS INTO LAKE
ಸ್ಥಳೀಯ ಪೊಲೀಸರು​ ಮತ್ತು ಅಗ್ನಿಶಾಮಕ ಸಿಬ್ಬಂದಿಯಿಂದ ಕೆರೆಯಲ್ಲಿ ರಕ್ಷಣಾ ಕಾರ್ಯಾಚರಣೆ (ETV Bharat)

By ETV Bharat Karnataka Team

Published : Jan 2, 2025, 9:49 AM IST

ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಕೆರೆಗೆ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಕುಂತೂರು ಕೆರೆಯಲ್ಲಿ ನಡೆಯಿತು.

ಮೈಸೂರಿನಲ್ಲಿ ಟೆಲಿಕಾಲರ್ ಆಗಿ ಕೆಲಸ ಮಾಡುತ್ತಿದ್ದ ಶುಭಾ ಮತ್ತು ಕಾರು ಚಾಲಕ ಊರ್ಜಿತ್ ಮೃತಪಟ್ಟಿದ್ದಾರೆ. ಖಾಸಗಿ ರೆಸ್ಟೋರೆಂಟ್​ನಲ್ಲಿ ಕೆಲಸ ಮಾಡುತ್ತಿರುವ ಮನಿತ್ ಎಂಬವರನ್ನು ರಕ್ಷಿಸಲಾಗಿದೆ.

ಶುಭಾ ಮತ್ತು ಮನಿತ್ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾಗ ತಡರಾತ್ರಿ ಕಾರು ನಿಯಂತ್ರಣ ತಪ್ಪಿ ಕುಂತೂರು ಕೆರೆಗೆ ಉರುಳಿದೆ.

ಮನಿತ್ ಕಾರಿನ ಬಾನೆಟ್ ಮೇಲೆ ನಿಂತು ಕೂಗುತ್ತಿರುವುದನ್ನು ಗಮನಿಸಿದ ಸ್ಥಳೀಯರು, ಪೊಲೀಸರು ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಮನಿತ್​ನನ್ನು ಕೆರೆಯಿಂದ ಮೇಲೆತ್ತಿದ್ದಾರೆ. ಆದರೆ ಶುಭಾ ಹಾಗೂ ಊರ್ಜಿತ್ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಮಾಂಬಳ್ಳಿ ಪೊಲೀಸರು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಇದನ್ನೂ ಓದಿ:ಹೊಸ ವರ್ಷಾಚರಣೆ ಮುಗಿಸಿ ಹಿಂತಿರುಗುವಾಗ ಅಪಘಾತ: ಸ್ಥಳದಲ್ಲೇ ಇಬ್ಬರು ಸಾವು - CAR ACCIDENT

ABOUT THE AUTHOR

...view details