ಕರ್ನಾಟಕ

karnataka

ETV Bharat / state

ಲಚ್ಯಾಣ ಸಿದ್ದಲಿಂಗ ಮುತ್ಯಾ ಜಾತ್ರೆಯಲ್ಲಿ ಅವಘಡ: ರಥದ ಚಕ್ರಕ್ಕೆ ಸಿಲುಕಿ ಮೂವರು ಸಾವು, ನಾಲ್ವರ ಸ್ಥಿತಿ ಗಂಭೀರ - Chariot Tragedy - CHARIOT TRAGEDY

ಲಚ್ಯಾಣ ಸಿದ್ದಲಿಂಗ ಮುತ್ಯಾನ ಜಾತ್ರಾ ಮಹೋತ್ಸವದಲ್ಲಿ ರಥ ಚಕ್ರಕ್ಕೆ ಸಿಲುಕಿ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ.

ಲಚ್ಯಾಣ ಸಿದ್ದಲಿಂಗ ಮುತ್ಯಾನ ಜಾತ್ರಾ ಮಹೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಸಾವು
ಲಚ್ಯಾಣ ಸಿದ್ದಲಿಂಗ ಮುತ್ಯಾನ ಜಾತ್ರಾ ಮಹೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಸಾವು

By ETV Bharat Karnataka Team

Published : Apr 28, 2024, 8:29 PM IST

Updated : Apr 29, 2024, 9:34 AM IST

ಲಚ್ಯಾಣ ಸಿದ್ದಲಿಂಗ ಮುತ್ಯಾ ಜಾತ್ರೆಯಲ್ಲಿ ಅವಘಡ

ವಿಜಯಪುರ:ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಸಿದ್ದಲಿಂಗ ಮುತ್ಯಾನ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ರಥದ ಚಕ್ರಕ್ಕೆ ಸಿಲುಕಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಭಿಷೇಕ್ ಮುಜಗೊಂಡ (17), ಸೋಬು ಸಿಂದೆ (51), ಸುರೇಶ್ ಕಟಕದೊಂಡ (36) ಮೃತಪಟ್ಟವರೆಂದು ಗುರುತಿಸಲಾಗಿದೆ.

ಭಾನುವಾರ ರಥೋತ್ಸವದಲ್ಲಿ ಸಹಸ್ರ ಸಂಖ್ಯೆಯಲ್ಲಿ ಭಕ್ತರು ಭಾಗಿಯಾಗಿದ್ದರು. ಜಾತ್ರೆಯಲ್ಲಿ ರಥ ಸಾಗುವ ಸಂದರ್ಭದಲ್ಲಿ ಉಂಟಾದ ನೂಕುನುಗ್ಗಲಿನಲ್ಲಿ ಆಯತಪ್ಪಿ ಏಳು ಜನ ರಥದ ಚಕ್ರಕ್ಕೆ ಸಿಲುಕಿದ್ದರು. ಪರಿಣಾಮವಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೋರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಭಾನುವಾರ ಗೋಧೋಳಿ ಮುಹೂರ್ತದಲ್ಲಿ ರಥೋತ್ಸವ ನೆರವೇರುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಜಾತ್ರಾ ಸಂಭ್ರಮದಲ್ಲಿದ್ದ ಗ್ರಾಮದಲ್ಲಿ ಮೌನ ಆವರಿಸಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ವಿಷಯ ತಿಳಿಯುತ್ತಲೇ ಇಂಡಿ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಬೀಡು ಬಿಟ್ಟಿದ್ದಾರೆ. ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಚಿಕ್ಕಮಗಳೂರು: ಪ್ರವಾಸಿ ಮಿನಿ ಬಸ್ ಪಲ್ಟಿ; ಬಾಲಕ ಸಾವು, 29 ಮಂದಿಗೆ ಗಾಯ - Mini Bus Accident

Last Updated : Apr 29, 2024, 9:34 AM IST

ABOUT THE AUTHOR

...view details