ಕರ್ನಾಟಕ

karnataka

ETV Bharat / state

ಬಳ್ಳಾರಿ: ಮದುವೆ ದಿಬ್ಬಣದ ಲಾರಿ ಪಲ್ಟಿ; ಇಬ್ಬರು ಸಾವು, 30 ಜನರಿಗೆ ಗಾಯ - ROAD ACCIDENT - ROAD ACCIDENT

ಬಳ್ಳಾರಿ ಜಿಲ್ಲೆಯಲ್ಲಿ ಲಾರಿ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.

ಬಳ್ಳಾರಿ: ಮದುವೆ ದಿಬ್ಬಣದ ಲಾರಿ ಪಲ್ಟಿ; ಇಬ್ಬರು ಸಾವು, 30 ಜನರಿಗೆ ಗಾಯ
ಬಳ್ಳಾರಿ: ಮದುವೆ ದಿಬ್ಬಣದ ಲಾರಿ ಪಲ್ಟಿ; ಇಬ್ಬರು ಸಾವು, 30 ಜನರಿಗೆ ಗಾಯ

By ETV Bharat Karnataka Team

Published : Apr 28, 2024, 8:19 PM IST

ಬಳ್ಳಾರಿ: ಜಿಲ್ಲೆಯ ಕುಡುತಿನಿ ಪಟ್ಟಣದ ಹೊರವಲಯದಲ್ಲಿನ ಎಚ್‌ಎಲ್‌ಸಿ ಕಾಲುವೆಯ ಬಳಿ ಮದುವೆಯ ದಿಬ್ಬಣದ ಲಾರಿಯೊಂದು ಪಲ್ಟಿಯಾಗಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಸುಮಾರು 30 ಜನ ಗಾಯಗೊಂಡಿರುವ ಘಟನೆ ಇಂದು ಸಂಜೆ ನಡೆದಿದೆ.

ಸೆರಗು ಗ್ರಾಮದ ಮಾರಮ್ಮ ಸ್ಥಳದಲ್ಲೇ ಮೃತಪಟ್ಟರೆ, ಬಳ್ಳಾರಿಯ ವಿಮ್ಸ್‌ಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲಿ ಭಾಗ್ಯಮ್ಮ ಎಂಬುವವರು ಕೊನೆಯುಸಿರೆಳೆದಿದ್ದಾರೆ. ಸೆರಗು ಗ್ರಾಮದ 35ಕ್ಕೂ ಅಧಿಕ ಮಂದಿ ಆಂಧ್ರಪ್ರದೇಶದ ಕೆರೆನಹಳ್ಳಿ ಗ್ರಾಮದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭಾಗಿಯಾಗಿ ವಾಪಸಾಗುತ್ತಿದ್ದಾಗ ಈ ವೇಳೆ ದುರ್ಘಟನೆ ಸಂಭವಿಸಿದೆ. ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಸಣ್ಣಪುಟ್ಟ ಗಾಯಗೊಂಡವರಿಗೆ ಕುಡುತಿನಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಮ್ಸ್‌ಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕುಡುತಿನಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಕಾರ-ಬೈಕ್​ ಮಧ್ಯೆ ಭೀಕರ ರಸ್ತೆ ಅಪಘಾತ, ಇಬ್ಬರು ಸಾವು - HORRIBLE ACCIDENT

ABOUT THE AUTHOR

...view details