ಕರ್ನಾಟಕ

karnataka

ETV Bharat / state

ಬೆಳಗಾವಿ: ಬೊಲೆರೋ-ಕಾರು ಅಪಘಾತದಲ್ಲಿ ಇಬ್ಬರು ಸಾವು; ಲಾರಿ ಡಿಕ್ಕಿಯಾಗಿ ಆಟೋ ಚಾಲಕ ಮೃತ - Belagavi Accidents - BELAGAVI ACCIDENTS

ಬೆಳಗಾವಿ ಜಿಲ್ಲೆಯಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಆಟೋ ಚಾಲಕ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.

Bolero pickup-car accident
ಬೊಲೆರೋ ಪಿಕ್​ಅಪ್- ಕಾರು ನಡುವೆ ಭೀಕರ ಅಪಘಾತ (ETV Bharat)

By ETV Bharat Karnataka Team

Published : Aug 10, 2024, 9:24 AM IST

ಚಿಕ್ಕೋಡಿ/ಬೆಳಗಾವಿ:ಬೊಲೆರೋ ಪಿಕ್ ಅಪ್ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ತಡರಾತ್ರಿ ತಾಲೂಕಿನ ಬೆಳಕೂಡ ಗೇಟ್ ಬಳಿ ನಡೆದಿದೆ.

ಮೃತರನ್ನು ಬಾಗಲಕೋಟೆ ಜಿಲ್ಲೆ ಮುಧೋಳ ಪಟ್ಟಣದ ರಾಕೇಶ್ ವಾಡೇಕರ (25) ಮತ್ತು ಸೌರಭ (19) ಎಂದು ಗುರುತಿಸಲಾಗಿದೆ. ಆನಂದ ಘಾಟಗೇ (29) ಮತ್ತು ವೀಕಾಸ ಬೀಳಗಿ (19) ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನಿಪ್ಪಾಣಿಯಿಂದ ಮುಧೋಳ ಕಡೆ ಹೊರಟಿದ್ದ ಕಾರಿಗೆ ಪಿಕ್ ಅಪ್ ವಾಹನ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಚಿಕ್ಕೋಡಿ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕೋಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾರಿ - ಆಟೋ ಅಪಘಾತ (ETV Bharat)

ಪ್ರತ್ಯೇಕ ಘಟನೆ, ಗೂಡ್ಸ್ ಆಟೋ ಚಾಲಕ ಸಾವು:ಮತ್ತೊಂದೆಡೆ, ಬೆಳಗಾವಿ ನಗರದ ಯಡಿಯೂರಪ್ಪ ಮಾರ್ಗದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಶನಿವಾರ ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭಸಿಸಿದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ಗೂಡ್ಸ್ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತಕ್ಕೀಡಾದ ಲಾರಿ (ETV Bharat)

ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದ ಅಮಿನ್ ಯರಗಟ್ಟಿ (45) ಮೃತ ದುರ್ದೈವಿ. ಕ್ಯಾಬೀಜ್ ತುಂಬಿಕೊಂಡು ಬೆಳಗಾವಿ ನಗರಕ್ಕೆ ಬರುತ್ತಿದ್ದ ವೇಳೆ ಆಟೋಗೆ ಗೂಡ್ಸ್ ಲಾರಿ ಗುದ್ದಿದೆ. ಅಪಘಾತದ ರಭಸಕ್ಕೆ ಕೆಳಗಡೆ ಬಿದ್ದ ಆಟೋ ಚಾಲಕ ಅಮಿನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲಾರಿ ಕೂಡ ಪಲ್ಟಿಯಾಗಿದ್ದು, ಚಾಲಕ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹಿರೇಬಾಗೆವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇನಲ್ಲಿ ಕಾರು-ಬಸ್ ಡಿಕ್ಕಿ: 7 ​​ಜನ ಸಾವು, 45 ಮಂದಿಗೆ ಗಾಯ - UP Road Accident

ABOUT THE AUTHOR

...view details