ಕರ್ನಾಟಕ

karnataka

ಮಂಡ್ಯ: ಕಲುಷಿತ ನೀರು ಸೇವಿಸಿ ಇಬ್ಬರು ಸಾವು, ನಾಲ್ವರ ಸ್ಥಿತಿ ಗಂಭೀರ - Contaminated Water Tragedy

By ETV Bharat Karnataka Team

Published : Aug 28, 2024, 8:03 AM IST

ಕಲುಷಿತ ನೀರು ಸೇವಿಸಿ ಇಬ್ಬರು ವಯೋವೃದ್ಧರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಇನ್ನೂ ಕೆಲವರು ಅಸ್ವಸ್ಥರಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

drinking water
ಚಿಕಿತ್ಸೆ ಪಡೆಯುತ್ತಿರುವ ಮಹಿಳೆ (ETV Bharat)

ಮಂಡ್ಯ: ಕಲುಷಿತ ನೀರು ಸೇವಿಸಿ ಇಬ್ಬರು ವಯೋವೃದ್ಧರು ಮೃತಪಟ್ಟು, ಇತರ ನಾಲ್ವರು ಆಸ್ಪತ್ರೆಯಲ್ಲಿ ಸಾವು - ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಕೆ.ಆರ್.ಪೇಟೆ ತಾಲೂಕಿನ ಗಡಿಭಾಗದಲ್ಲಿರುವ ಸಂತೆಬಾಚಹಳ್ಳಿ ಹೋಬಳಿಯ ಭಾರತಿಪುರ ಕ್ರಾಸ್ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಮಾರೇನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ನೀರು ಸೇವಿಸಿದ ಬಳಿಕ ತೀವ್ರ ವಾಂತಿ, ಭೇದಿ ಉಂಟಾಗಿ ಗ್ರಾಮದ ಹಿರಿಯ ಮಹಿಳೆಯರಾದ ಜವರಮ್ಮ ಹಾಗೂ ಚಿಕ್ಕಮ್ಮ ಎಂಬವರು ಮೃತಪಟ್ಟಿದ್ದಾರೆ. ಗಂಭೀರ ಸ್ಥಿತಿಯಲ್ಲಿರುವ ಇತರ ನಾಲ್ವರು ಹಾಸನ ಜಿಲ್ಲಾ ಆಸ್ಪತ್ರೆಯ ತುರ್ತು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಕೆಲವರು ನೆರೆಯ ಚನ್ನರಾಯಪಟ್ಟಣ ಹಾಗೂ ಶ್ರವಣಬೆಳಗೊಳದ ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

'ಘಟನೆ ನಡೆದು ನಾಲ್ಕು ದಿನಗಳು ಕಳೆದರೂ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದೇ, ಕಾಟಾಚಾರಕ್ಕೆ ಗ್ರಾಮಕ್ಕೆ ಆಗಮಿಸಿ ತೆರಳುತ್ತಿದ್ದಾರೆ. ಜಿಲ್ಲಾ ಮತ್ತು ತಾಲೂಕು ಆಡಳಿತ, ಸಂಬಂಧಪಟ್ಟ ಇಲಾಖೆ ಕೂಡ ಯಾವುದೇ ಕ್ರಮ ವಹಿಸಿಲ್ಲ. ಇದರಿಂದಾಗಿ ಗ್ರಾಮದ ಜನರು ಕಲುಷಿತ ನೀರು ಸೇವಿಸಿ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ' ಎಂದು ಮುಖಂಡ ಯೋಗೇಶ್ ಆರೋಪಿಸಿದ್ದು, ಸೂಕ್ತ ಕ್ರಮಕ್ಕೆ ಅಗ್ರಹಿಸಿದ್ದಾರೆ.

ಇದನ್ನೂ ಓದಿ:ಬೆಳಗಾವಿ: ರಥದ ಮೇಲಿನ ಬೆಳ್ಳಿ ಮೂರ್ತಿ ಬಿದ್ದು ಸ್ಥಳದಲ್ಲೇ ಬಾಲಕ ಸಾವು - Boy Died

ABOUT THE AUTHOR

...view details